ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ೧೨೪ನೇ ರಕ್ತದಾನ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ಡಿ.೩ರಂದು ಭಾನುವಾರ ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೧ರ ವರೆಗೆ ನಡೆಯಲಿದೆ.
Advertisement
ಮುಖ್ಯ ಅತಿಥಿಗಳಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಶಿವಕುಮಾರ್, ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಭಾಗವಹಿಸುವರು. ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡುವಂತೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement