
ಬಂಟ್ವಾಳ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇದರ ಆಶ್ರಯದಲ್ಲಿ ಬಂಟ್ವಾಳ ಗಿರಿಗುಡ್ಡೆಯಲ್ಲಿರುವ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು
ಕಾರ್ಯಕ್ರಮವನ್ನು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿಂದಿಯ ನಾಯಕ್ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ಮಾನವೀಯ ಮಾಲ್ಯಗಳಿಗೆ ಬೆಲೆಕೊಟ್ಟು ತೃಪ್ತಿಯುತ ಜೀವನ ನಡೆಸಬೇಕು, ದುಶ್ಚಟಗಳಿಗೆ ಬಲಿಯಾಗಿ ಜೀವನವನ್ನು ಹಾಳು ಮಾಡಿಕೊಳ್ಳದಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

25 ವರ್ಷದಿಂದ ಹಾಸ್ಟೆಲ್ ನಲ್ಲಿ ಅಡುಗೆ ಕೆಲಸ ನಿರ್ವಹಿಸಿ ನಿವೃತ್ತರಾದ ಸಂತೋಷ್ ಅವರನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಸಿಬ್ಬಂದಿಗಳಾದ ರೇಖಾ, ಅರ್ಪಿತಾ, ಹಾಸ್ಟೆಲ್ ಮೇಲ್ವಿಚಾರಕ ವಿಜಯ್,
ವೀರಪ್ಪ, ವಸತಿ ನಿಲಯದ ಅಧ್ಯಕ್ಷ ಚೇತನ್
ಉಪಾಧ್ಯಕ್ಷ ಅವಿನಾಶ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತ ಪಡಿಸಿದರು. ವಿನೀತ್ ಸ್ವಾಗತಿಸಿ, ಕಿರಣ್ ವಂದಿಸಿದರು.
