ಬಂಟ್ವಾಳ: ಸರಕಾರಿ ಶಾಲೆಗಳಲ್ಲಿ ಮಕ್ಕಳಿಲ್ಲ ಎನ್ನುವ ಸಂದರ್ಭದಲ್ಲಿ ಅತೀ ದೊಡ್ಡ ಸಾಧನೆಯನ್ನು ಮಾಡಿ ಇಂದು ಶಾಲೆಯಲ್ಲಿ 1200ಕ್ಕಿಂತಲೂ ಹೆಚ್ಚು ಮಕ್ಕಳನ್ನು ಕರೆತರುವ ಕಾರ್ಯ ದಡ್ಡಲಕಾಡು ಶಾಲೆಯಲ್ಲಿ ನಡೆದಿದೆ ಇದೊಂದು ಅಭೂತಪೂರ್ವ ಹಾಗೂ ಸರಕಾರದ ಕಣ್ತರೆಸುವ ಕೆಲಸ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಅವರು ಶಾಸಕ ರಾಜೇಶ್ ನಾಯ್ಕ್ ಅವರ ಮುತುವರ್ಜಿಯಲ್ಲಿ ಸರಕಾರದ ವಿವೇಕ ಯೋಜನೆಯಡಿ ಮಂಜೂರುಗೊಂಡ 49 ಲಕ್ಷ ಅನುದಾನ, ಎಂಆರ್ ಪಿಎಲ್ ನ 30 ಲಕ್ಷ ಆರ್ಥಿಕ ಸಹಕಾರ ಹಾಗೂ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ನ ಸಹಕಾರದಿಂದ ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಶಾಲೆಗೆ ನಿರ್ಮಾಣಗೊಂಡ ನೂತನ ಕಟ್ಟಡವನ್ನು ಉದ್ಘಾಟಿಸಿ ಬಳಿಕ ದಡ್ಡಲಕಾಡು ಚಿಣ್ಣರೋತ್ಸವ ದಲ್ಲಿ ಪಾಲ್ಗೊಂಡು ಮಾತನಾಡಿದರು.
ತನ್ನ ಸಂಸದ ನಿಧಿಯಿಂದ 10 ಲಕ್ಷ ಅನುದಾನವನ್ನು ತಕ್ಷಣ ಕೊಡುವುದಾಗಿ ಭರವಸೆ ನೀಡಿದ ನಳಿನ್ ಕುಮಾರ್ ಸರಕಾರಿ ಶಾಲೆಯ ಮಕ್ಕಳಲ್ಲಿರುವ ಪ್ರತಿಭೆಯನ್ನು ದಡ್ಡಲಕಾಡು ಶಾಲೆಯ ಮಕ್ಕಳು ತೋರಿಸಿ ಕೊಟ್ಟಿದ್ದಾರೆ.
ಚಿಣ್ಣರೋತ್ಸವದ ಮೂಲಕ ಪ್ರತಿಭೆಯನ್ನು ಗುರುತಿಸುವ ಕಾರ್ಯ ಇಲ್ಲಿ ಆಗಿದೆ ಎಂದರು.
ಶಾಸಕ ರಾಜೇಶ್ ನಾಯ್ಕ್ ಮಾತನಾಡಿ ಚಿಣ್ಣರೋತ್ಸವದ ಮೂಲಕ ಮಕ್ಕಳ ಪ್ರತಿಭೆ ಅನಾವರಣ ಗೊಂಡಿದೆ. ಈ ಭಾಗದ ಮಕ್ಕಳಿಗೆ ವಿದ್ಯಾದಾನ ಮಾಡುವ ಈ ವಿದ್ಯಾಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಆಶಿಸಿದರು.
ವಿಧಾನಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಮಾತನಾಡಿ ನಮ್ಮ ಹಿರಿಯರು ಆರಂಭಿಸಿದ ಸರಕಾರಿ ಶಾಲೆಗಳನ್ನು ಹೆಮ್ಮರವಾಗಿ ಬೆಳೆಸುವ ಕರ್ತವ್ಯ ನಮ್ಮದು ಎಂದು ತಿಳಿಸಿದರು.
ಕಿಯೋನಿಕ್ಸ್ ನಿಕಟಪೂರ್ವ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ರಾಘವೇಂದ್ರ ಬಳ್ಳಾಲ್, ಪ್ರೌಢಶಾಲಾ ವಿಭಾಗದ ಎಸ್ ಡಿ ಎಂಸಿ ಕಾರ್ಯಧ್ಯಕ್ಷ ಪುರುಷೋತ್ತಮ ಅಂಚನ್, ಪ್ರಾಥಮಿಕ ಶಾಲಾ ಎಸ್ ಡಿ ಎಂಸಿ ಅಧ್ಯಕ್ಷ ಶೇಖರ್ ಅಂಚನ್, ರಾಯಿ ಗ್ರಾ.ಪಂ. ಅಧ್ಯಕ್ಷ ಸಂತೋಷ್ ರಾಯಿಬೆಟ್ಟು
ಪಂಜಿಕಲ್ಲು ಗ್ರಾ.ಪಂ ಅಧ್ಯಕ್ಷೆ ನಳಿನಿ ಪ್ರಸಾದ್
ಉಪಾಧ್ಯಕ್ಷ ಮೋಹನ್ ದಾಸ್, ಗ್ರಾ.ಪಂ. ಸದಸ್ಯರಾದ ಪೂವಪ್ಪ ಮೆಂಡನ್, ರೂಪಾಶ್ರೀ
ಎಂ ಆರ್ ಪಿ ಎಲ್ ನಾಗರಾಜ್, ಕುಮಾರ್ ಆಳ್ವ, ಪ್ರೌಢಶಾಲೆಯ ಮುಖ್ಯ ಶಿಕ್ಷಕ ರಮಾನಂದ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವಿನ್ನಿ ಸಿಂಥಿಯಾ ಲೋಬೋ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಪ್ರಾಸ್ತಾವಿಕ ವಾಗಿ ಮಾತನಾಡಿದರು, ಸಹಶಿಕ್ಷಕಿ ಹಿಲ್ಡಾ ಫೆರ್ನಾಂಡೀಸ್ ಸ್ವಾಗತಿಸಿದರು, ಪ್ರೌಢಾಲೆಯ ಮುಖ್ಯ ಶಿಕ್ಷಕ ರಮಾನಂದ ವಂದಿಸಿದರು.
ಶಿಕ್ಷಕಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು.