Advertisement
ಬಂಟ್ವಾಳ: ಸಜೀಪಮೂಡ ಗ್ರಾಮದ ದ.ಕ. ಜಿ. ಪಂ. ಹಿ. ಪ್ರಾಥಮಿಕ ಶಾಲೆ ಕಾರಾಜೆ ಇದರ ಬೆಳ್ಳಿ ಹಬ್ಬ ಸಂಭ್ರಮದ ಸವಿನೆನೆಪು ಕಾರ್ಯಕ್ರಮ ನಡೆಯಿತು.
ಸಜೀಪಮೂಡ ಗ್ರಾ. ಪಂ. ಅಧ್ಯಕ್ಷೆ ಶೋಭಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಬಿ. ರಮಾನಾಥ ರೈ,. ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ. ಮಾಜಿ ಸದಸ್ಯ ಕೆ. ಸಂಜೀವ ಪೂಜಾರಿ, ಪಂಚಾಯತಿ ಉಪಾಧ್ಯಕ್ಷೆ ಫೌಝಿಯಾ, ಸದಸ್ಯರಾದ ಸೀತರಾಮ ಅಗೋಳಿಬೆಟ್ಟು, ಸೋಮನಾಥ ಬಂಗೇರ, ಕುಶಾಲಾಕ್ಷ, ಮಹಾದೇವಿ, ಶಿಕ್ಷಣ ಸಂಯೋಜಕಿ ಪ್ರತಿಮಾ ವೈ.ವಿ., ಬಿಆರ್ಪಿ ವಿದ್ಯಾ, ಸಜೀಪಮೂಡ ಕ್ಲಸ್ಟರ್ ಸಂಪನ್ಮೂಲ ಅಧಿಕಾರಿ ಇಂದಿರಾ, ನೂರುಲ್ ಹುದಾ ಜುಮ್ಮಾ ಮಸೀದಿ ಅಧ್ಯಕ್ಷ ಹಾಜಿ ಶೇಕಬ್ಬ, ಸಿವಿಲ್ ಎಂಜಿನಿಯರ್ ಶೈಲೇಶ್ ಪೂಜಾರಿ, ಸುಶೀಲಾ ಪೂಜಾರಿ, ಸಹಾಯಕ ಪ್ರಾಧ್ಯಪಕ ದಿನೇಶ್ ನಾಯಕ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ಪಿ.ಎಸ್. ಉಪಸ್ಥಿತರಿದ್ದರು. ಪ್ರಭಾರ ಮುಖ್ಯೋಪಾಧ್ಯಾಯಿನಿ ಸುಜಾತ ಎಂ. ಸ್ವಾಗತಿಸಿ, ಪ್ರಾಸ್ತವಿಕ ಮಾತುಗಳನ್ನಾಡಿದರು.
Advertisement