
ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಮಂಡ್ಯದ ವಿಶ್ವ ಮಾನವ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಜರುಗಿದ ಮೈಸೂರು ವಿಭಾಗ ಮಟ್ಟದ ಭಾವ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ರಾಜ್ಯ ಮಟ್ಟದ ಸ್ಪರ್ಧೆಗೆ ಕಾರ್ಮೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜು, ಮೊಡಂಕಾಪು ಇಲ್ಲಿನ ವಿದ್ಯಾರ್ಥಿನಿ ಶೃತಿ ಆಯ್ಕೆಯಾಗಿದ್ದಾರೆ. ರಾಜ್ಯ ಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲೂ ದ.ಕ.ಜಿಲ್ಲೆಯನ್ನು ಪ್ರತಿನಿಧಿಸಿದ್ದರು.

