ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ ನಡೆಯಲಿರುವ ಕಲಾವಳಿ-2024 ಕಾರ್ಯಕ್ರಮದ ಲಾಂಛನ ಬಿಡುಗಡೆ ಕಾರ್ಯಕ್ರಮ ಇತ್ತೀಚಿಗೆ ದ.ಕ.ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ವಾರ್ಷಿಕ ಮಹಾ ಸಭೆ ಕಾರ್ಯಕ್ರಮದಲ್ಲಿ ನಡೆಯಿತು.
Advertisement
ಜಿಲ್ಲಾ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ಲಾಛಂನ ಬಿಡುಗಡೆ ಗೊಳಿಸಿದರು. ಬಂಟ್ವಾಳ ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ, ಉಪಾಧ್ಯಕ್ಷ ಸುಕುಮಾರ್ ಬಂಟ್ವಾಳ, ಕೋಶಾಧಿಕಾರಿ ರಮೇಶ್ ಸಾಲಿಯಾನ್ , ಸಮಿತಿ ಸದಸ್ಯರಾದ ಮಚೇಂದ್ರ ಸಾಲಿಯಾನ್, ಸುರೇಶ ಕುಲಾಲ್, ರಮೇಶ್ ಸಾಲಿಯಾನ್ ಸಂಚಯಗಿರಿ, ನಾರಾಯಣ ಸಿ.ಪೆರ್ನೆ, ಆಶಾ , ಜಲಜಾಕ್ಷಿ ಕುಲಾಲ್ ಹಾಗೂ ಜಿಲ್ಲೆಯ ಪ್ರಮುಖ ಕುಲಾಲ ಸಂಘದ ಅಧ್ಯಕ್ಷರುಗಳು, ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು
Advertisement