ಬಂಟ್ವಾಳ: ನೇತ್ರಾವತಿ ನದಿ ತೀರದಲ್ಲಿರುವ, ಸಜೀಪಮುನ್ನೂರು ಗ್ರಾಮದ ಮುಗುಳ್ಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಸೋಮವಾರ ಶ್ರೀಕ್ಷೇತ್ರದಲ್ಲಿ ನಡೆಯಿತು.
Advertisement
ಕ್ಷೇತ್ರದ ನಾಗರ ಕಟ್ಟೆಯಲ್ಲಿ ನಾಗತಂಬಿಲ ನಡೆಯಿತು ಬಳಿಕ ಆಶ್ಲೇಷ ಬಲಿ ಹೋಮ, ಆಶ್ಲೇಷ ಬಲಿ ಪೂಜೆ, ಸಾನಿಧ್ಯ ಕಲಶಾಭಿಷೇಕ, ಗಣಯಾಗ ಹಾಗೂ ವಿಶೇಷ ಮಹಾಪೂಜೆ ನೆರವೇರಿತು. ಸಜೀಪಮಾಗಣೆಯ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ ಮೊದಲಾದವರು ಉಪಸ್ಥಿತರಿದ್ದರು.
Advertisement