ಬಂಟ್ವಾಳ: ರಾರಾಸಂ ಫೌಂಡೇಷನ್ ಬಂಟ್ವಾಳ ಇದರ ಆಶ್ರಯದಲ್ಲಿ 13ನೇ ವರ್ಷದ ಸಾಂಸ್ಕೃತಿಕ ಕಲರವ ರಾರಾಸಂಭ್ರಮ ಡಿ.25ರಂದು ಸೋಮವಾರ ಬೆಳಿಗ್ಗೆ 9 ರಿಂ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.
ಬೆಳಿಗ್ಗೆ 10ಕ್ಕೆ ವಿಜಯ ಬ್ಯಾಂಕಿನ ನಿವೃತ್ತ ಪ್ರಬಂಧಕ ಸೋಮಯ್ಯ ಮೂಲ್ಯ ಹನೈನೆಡೆ ಕಾರ್ಯಕ್ರಮ ಉದ್ಘಾಟಿಸುವರು, ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಎಸ್ವಿಎಸ್ ಅನುದಾನಿತ ಹಿ. ಪ್ರಾ. ಶಾಲೆ ಪಾಣೆಮಂಗಳೂರು ಇಲ್ಲಿನ ಮುಖ್ಯ ಶಿಕ್ಷಕ ವಿನೋದ್ ಎನ್., ಜೆಸಿಐ ಬಂಟ್ವಾಳದ ನಿಯೋಜಿತ ಅಧ್ಯಕ್ಷೆ ರಶ್ಮಿ ಶೆಟ್ಟಿ, ಉದ್ಯಮಿ ಸೋಮನಾಥ ಸಾಲಿಯಾನ್ ಭಾಗವಹಿಸುವರು,
ಸಂಜೆ ಯೂನಿಯನ್ ಬ್ಯಾಂಕ್ ಪೊಳಲಿ ಶಾಖೆಯ ಪ್ರಬಂಧಕ ಪ್ರಸಾದ್ ಕುಮಾರ್ ಮಾರ್ನಬೈಲು ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು ಅತಿಥಿಗಳಾಗಿ ನಿವೃತ್ತ ಮುಖ್ಯ ಶಿಕ್ಷಕ ಬಿ. ರಾಮಚಂದ್ರ ರಾವ್, ರೋಟರಿ ಕ್ಲಬ್ ಬೈಕಂಪಾಡಿಯ ಅಧ್ಯಕ್ಷ ಸುಧಾಕರ ಸಾಲ್ಯಾನ್, ಮಡಂತ್ಯಾರು ಹೈಸ್ಕೂಲ್ ರಿಯೂನಿಯನ್ ಸಂಯೋಜಕ ರಾಯನ್ ಡಿಸೋಜಾ ಮಸ್ಕತ್, ಲಯನ್ಸ್ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪ್ರಶಾಂತ್ ಕೋಟ್ಯಾನ್, ಜೆಸಿಐ ಮಡಂತ್ಯಾರಿನ ನಿಯೋಜಿತ ಅಧ್ಯಕ್ಷ ವಿಕೇಶ್ ಮಾನ್ಯ ಭಾಗವಹಿಸುವರು. ಈ ಸಂದರ್ಭ ಬಹುಮುಖ ಪ್ರತಿಭೆ ಶ್ರೀನಿಧಿ ಪಿ.ಎಸ್. ಅವರಿಗೆ ರಾರಾಸಂ ಪುರಸ್ಕಾರ ನೀಡಿ ಗೌರವಿಸಲಾಗುವುದು.
ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ಹಾಗೂ ಮುಕ್ತ ವಿಭಾಗದಲ್ಲಿ ವಿವಿಧ ಸ್ಪರ್ಧಾಕಾರ್ಯಕ್ರಮಗಳು ನಡೆಯಲಿದೆ ಎಂದು ರಾರಾಸಂ ಫೌಂಡೇಷನ್ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.