ಬಂಟ್ವಾಳ: ದ.ಕ. ಗ್ಯಾರೇಜ್ ಮಾಲಕರ ಸಂಘ ಬಂಟ್ವಾಳ ವಲಯದ ವಾರ್ಷಿಕ ಕ್ರೀಡಾಕೂಟ ಬಂಟ್ವಾಳದ ಎಸ್ ವಿ ಎಸ್ ಹೈಸ್ಕೂಲ್ ಮೈದಾನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದ ಆಡಳಿತ ಮೋಕ್ತೇಸರ ಅಶೋಕ್ ಶೆಣೈ ಉದ್ಘಾಟಿಸಿದರು.
ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಜಿಲ್ಲಾಧ್ಯಕ್ಷ ಕಿಶೋರ್ ಕೇಶವ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಕ್ರೀಡಾಕೂಟದಲ್ಲಿ ಸೋಲು ಗೆಲುವು ಸಹಜ. ಅದನ್ನು ಸಮಾನವಾಗಿ ಸ್ವೀಕರಿಸಿಕೊಂಡು ಸೌಹಾರ್ದಯುತವಾಗಿ ಕ್ರೀಡೆಯಲ್ಲಿ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ದ.ಕ. ಗ್ಯಾರೇಜು ಮಾಲಕರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಅತ್ತಾವರ ಮಾತನಾಡಿ ಬಂಟ್ವಾಳ ವಲಯ ಹೆಚ್ಚು ಸಂಘಟನಾತ್ಮಕವಾಗಿ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರುತ್ತಿರುವುದು ಅಭಿನಂದನೀಯ ಎಂದರು.
ಸಂಘದ ಅಧ್ಯಕ್ಷ ಜಗದೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ.ಕ. ಗ್ಯಾರೇಜು ಮಾಲಕರ ಸಂಘದ ಚೇರ್ಮನ್ ಎಂ. ದಿವಾಕರ್ ಭಾಗವಹಿಸಿದ್ದರು. ಸಂಘದ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ಜನಾರ್ದನ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಗೌರವ ಸಲಹೆಗಾರ ಸುಧಾಕರ ಸಾಲ್ಯಾನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಪ್ರಶಾಂತ್ ಭಂಡಾರ್ಕರ್ ವಂದಿಸಿದರು.