ಬಂಟ್ವಾಳ: ಬೆಂಜನಪದವಿನ ಶುಭಲಜ್ಷ ಸಭಾಂಗಣದಲ್ಲಿ ನಡೆದ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ 36ನೇ ಸಮಾವೇಶದಲ್ಲಿ ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿಯಮಿತಕ್ಕೆ ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಕ. ಸಂಜೀವ ಪೂಜಾರಿ ಪ್ರಶಸ್ತಿ ಸ್ವೀಕರಿಸಿದರು. ಗೋಕರ್ಣಥ ಕ್ಷೇತ್ರ ಕುದ್ರೋಳಿ ಇದರ ಕೋಶಾಧಿಕಾರಿಯಾಗಿ ಆರ್ ಪದ್ಮರಾಜ್, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ರಾಜೇಶ್ ಬಿ. ಗಣ್ಯರಾದ ನಾರ್ದನ್ ಸ್ಕೈ ಪ್ರಾಪರ್ಟೀಸ್ ನಿರ್ದೇಶಕರಾದ ಕೃತಿನ್ ಅಮೀನ್, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕಾರಾಂ ಪೂಜಾರಿ ಮುಖ್ಯ ಮಂತ್ರಿಗಳ ಮಾಜಿ ಆಪ್ತ ಸಹಾಯಕ ನಿರ್ಮಲ್ ಜಗನ್ನಾಥ್ ಬಂಗೇರ, ಉದ್ಯಮಿಗಳಾದ ನಟೇಶ್ ಪೂಜಾರಿ ಬೆಂಗಳೂರು ಲೋಕೇಶ್ ಪೂಜಾರಿ ಕಲ್ಲಡ್ಕ ವಾರ್ಷಿಕ ಸಮಾವೇಶದ ನಿರ್ದೇಶಕ ಭುವನೇಶ್ ಪಚ್ಚಿನಡ್ಕ, ದಿನಕರ್ ಬಂಗೇರ, ಜಗದೀಶ್ ಚಂದ್ರ ಡಿ.ಕೆ. ಬಂಟ್ವಾಳ ಘಟಕದ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ ಉದಯ್ ಅಮೀನ್ ಮಟ್ಟ, ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಕುಸುಮಾಕರ ಕುಂಪಲ ರಾಜೇಶ್ ಸುವರ್ಣ ಬಿ.ಸಿ. ರೋಡ್, ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ ಬೀಡಿನಪಾಲು ನಿರ್ದೇಶಕರಾದ ರಮೇಶ್ ಅನ್ನಪಾಡಿ, ವಿಠಲ ಬೆಲ್ಚಡ ಚೇಳೂರು, ಅಶೋಕ್ ಪೂಜಾರಿ ಕೋಮಾಲಿ, ಗಿರೀಶ್ ಕುಮಾರ್ ಪೆರ್ವ ಜಯಶಂಕರ್ ಕಾನ್ಸಾಲೆ, ಸುಜಾತ ಎಂ., ವಾಣಿ ವಸಂತ್, ಅರುಣ್ ಕುಮಾರ್ ಎಂ. ಆಶಿಶ್ ಪೂಜಾರಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಮಮತಾ. ಜಿ ಹಾಗೂ ಶಾಖಾ ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.