ಬಂಟ್ವಾಳ: ನಾಟಕ ಕಲಾವಿದನೋರ್ವ ಮರಕ್ಕೆ ಬೈಕ್ ಡಿಕ್ಕಿಯಾಗಿ ಮೃತಪಟ್ಟ ಘಟನೆ ದೇವಸ್ಯ ಪಡೂರು ಗ್ರಾಮದ ಮರಾಯಿದೊಟ್ಟು ಕೊಡ್ಯಮಲೆ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ.
ಕೊಡ್ಯಮಲೆ ನಿವಾಸಿ ಗೌತಮ್ (27) ಮೃತಪಟ್ಟ ದುರ್ದೈವಿ. ನಾಟಕ ಕಲಾವಿದನಾಗಿರುವ ಈತ ಬೆಳುವಾಯಿಯಲ್ಲಿ ನಡೆದ ಕದಂಬ ನಾಟಕದಲ್ಲಿ ಭಾಗವಹಿಸಿ ಹಿಂತಿರುಗುವ ವೇಳೆ ಈ ದುರ್ಘಟನೆ ನಡೆದಿದೆ.
Advertisement
ಸರಪಾಡಿ ನಿವಾಸಿ ಪ್ರವೀಣ್ ಕುಮಾರ್ ಎಂಬವರು ತನ್ನ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಯಾರೋ ವ್ಯಕ್ತಿ ಬೈಕ್ ಗೆ ಡಿಕ್ಕಿಯಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಹತ್ತಿರ ಹೋಗಿ ನೋಡಿದಾಗ ತನ್ನ ಪರಿಚಯದ ಗೌತಮ್ ಎಂಬುದು ಗೊತ್ತಾಗಿದೆ. ತಕ್ಷಣ ಅವರ ಮನೆಯವರಿಗೆ ವಿಷಯ ತಿಳಿಸಿ ಆಂಬ್ಯುಲೆನ್ಸ್ ಮೂಲಕ ಬಂಟ್ವಾಳದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅವರನ್ನು ಪರೀಕ್ಷಿಸಿದ ವೈದ್ಯರು ಮೃತ ಪಟ್ಟಿರಯವುದಾಗಿ ತಿಳಿಸಿದ್ದಾರೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement