ಬಂಟ್ವಾಳ: ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ನ್ಯಾಯವಾದಿ ಸುರೇಶ್ ಕುಮಾರ್ ನಾವೂರು ಅವರನ್ನು ಸರಕಾರ ನೇಮಕಗೊಳಿಸಿ ಆದೇಶ ಹೊರಡಿಸಿದೆ.
Advertisement
ಬಿ.ಸಿ.ರೋಡಿನಲ್ಲಿ ನೋಟರಿ, ನ್ಯಾಯವಾದಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸುರೇಶ್ ಕುಮಾರ್ ನಾವೂರು ಅವರು ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಕಟ್ಟಡ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು ಜೆಸಿಐ ಬಂಟ್ವಾಳದ ಪೂರ್ವಾಧ್ಯಕ್ಷರು, ರೋಟರಿ ಕ್ಲಬ್ ಬಂಟ್ವಾಳ ಟೌನ್, ವಕೀಲರ ಸಂಘ ಸಹಿತ ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
Advertisement