ಬಂಟ್ವಾಳ: ಪುದು ಗ್ರಾಮದ ಸುಜೀರು ದತ್ತನಗರದ ಶ್ರೀ ವೀರ ಹನುಮಾನ್ ಮಂದಿರದ 22ನೇ ವಾರ್ಷಿಕೋತ್ಸವ ಜ. 15ರಂದು ನಡೆಯಲಿದೆ. ಅಂದು ಬೆಳಿಗ್ಗೆ ಗಣಹೋಮ, ಪಂಚಾಮೃತ ಅಭಿಷೇಕ, ಶ್ರೀ ಸತ್ಯನಾರಾಯಣ ಪೂಜೆ, ಮಹಾಪೂಜೆ ನಡೆಯಲಿದೆ. ಬೆಳಿಗ್ಗೆ 11ಕ್ಕೆ ಒಡಿಯೂರು ಶ್ರೀ ಗುರುದೇವಾದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಗಣ್ಯರು ಭಾಗವಹಿಸಲಿದ್ದಾರೆ. ಬಳಿಕ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರ್ರಿ 9 ರಿಂದ ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ಕೃಪಾಪೋಷಿತ ದಶಾವತಾರ ಯಕ್ಷ ಮಂಡಳಿಯಿಂದ ಶಿವಧೂತ ಗುಳಿಗೆ ಯಕ್ಷಗಾನ ನಡೆಯಲಿದೆ.
Advertisement