ಬಂಟ್ವಾಳ: ಇಲ್ಲಿನ ಬಂಟ್ವಾಳ ವಿಧಾನಸಭಾ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿದ್ದು, ಶಾಸಕರ ಕಾಲಿಗೆ ಗಾಯವಾಗಿದೆ. ಭಾನುವಾರ ಮಧ್ಯಾಹ್ನ ಮಂಗಳೂರು ಹೊರವಲಯದ ತೆಂಕ ಎಡಪದವು ಎಂಬಲ್ಲಿ ಘಟನೆ ನಡೆದಿದ್ದು ಬಜಪೆ ಠಾಣೆಯಲ್ಲಿ ಕಾರು ಚಾಲಕ ಮೊಹಮ್ಮದ್ ಸುಫೈಲ್ ಎಂಬಾತನ ವಿರುದ್ದ ಶಾಸಕರ ಆಪ್ತಕಾರ್ಯದರ್ಶಿ ಪವನ್ ಕುಮಾರ್ ಶೆಟ್ಟಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಶಾಸಕ ರಾಜೇಶ್ ನಾಯ್ಕ್ ಅವರು ಮಕರ ಸಂಕ್ರಮಣದ ಪ್ರಯುಕ್ತ ತೆಂಕ ಎಡಪದವಿನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪೂಜೆ ಮುಗಿಸಿ ವಾಪಾಸು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿರುವ ವೇಳೆ ಅತೀ ವೇಗದಿಂದ ಬಂದ ಕಾರು ಡಿಕ್ಕಿಯಾಗಿ ಅಪಘಾತವಾಗಿದೆ. ಬಳಿಕ ಚಾಲಕ ಕಾರು ನಿಲ್ಲಿಸಿದೆ ಅತೀ ವೇಗವಾಗಿ ಹೋಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಶಾಸಕರು ಬಿದ್ದು ಗಾಯವಾಗಿದ್ದು, ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಶಾಸಕರು ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕಾರು ಚಾಲಕನನ್ನು ಪೋಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
—