ಬಂಟ್ವಾಳ: ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ವಾರ್ಷಿಕೋತ್ಸವ, ಮಕ್ಕಳ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಮಂಗಳವಾರ ನಡೆಯಿತು.
ಶಾಲಾ ಸಂಚಾಲಕ ಹಾಗೂ ಅಕ್ಕರಂಗಡಿ ಜುಮ್ಮಾ ಮಸೀದಿ ಅಧ್ಯಕ್ಷ ಅಬ್ದುಲ್ ಹಮೀದ್ ಬಾವುಂಞಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ, ನಾರ್ಶಾ ಮೈದಾನ ಶಾಲಾ ನಿವೃತ್ತ ಮುಖ್ಯ ಶಿಕ್ಷಕ ರಾಮಕೃಷ್ಣರಾವ್, ಪಾಣೆಮಂಗಳೂರು ಎಸ್ ಎಲ್ ಎನ್ ಪಿ ಶಾಲಾ ಮುಖ್ಯ ಶಿಕ್ಷಕಿ ಶ್ವೇತಾ ಕಾಮತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಇದೇ ವೇಳೆ ಶಾಲೆಯಲ್ಲಿ ಸುಮಾರು 30 ವರ್ಷ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಜಯಲಕ್ಷ್ಮಿ ಭಟ್ ಅವರಿಗೆ ಶಾಲಾಡಳಿತ ಮಂಡಳಿ ಹಾಗೂ ಹಳೆ ವಿದ್ಯಾರ್ಥಿಗಳ ವತಿಯಿಂದ 4 ಪವನ್ ಚಿನ್ನಾಭರಣ ಉಡುಗೊರೆಯಾಗಿ ನೀಡಿ ಸನ್ಮಾನಿಸಿ, ಗೌರವಿಸಲಾಯಿತು.
ದೈಹಿಕ ಶಿಕ್ಷಣ ಶಿಕ್ಷಕ ರಾಧಾಕೃಷ್ಣ, ಗೌರವ ಶಿಕ್ಷಕರಾದ ನಿಶಾಂತ್ ಮತ್ತು ಆಯಿಶಾ ಸುನೈನ, ಸಲಹಾ ಸಮಿತಿ ಸದಸ್ಯ ಅಬ್ದುಲ್ ರಹಿಮಾನ್, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಾಲಾ ಮುಖ್ಯೋಪಾಧ್ಯಾಯ ಅಬ್ದುಲ್ ಹಮೀದ್ ಸ್ವಾಗತಿಸಿ, ಶಾಲಾ ಸಹ ಶಿಕ್ಷಕ ಧನೇಶ್ವರ ಸನ್ಮಾನ ಪತ್ರ ವಾಚಿಸಿದರು. ಸಹ ಶಿಕ್ಷಕ ನೂರುದ್ದೀನ್ ಜಿ ಎಂ ಕಾರ್ಯಕ್ರಮ ನಿರೂಪಿಸಿದರು.
—