ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದಲ್ಲಿ ಗುರುವಾರ ಪ್ರಾತಃ ಗಂಟೆ 8ರಿಂದ 8.17ರ ಮಕರ ಲಗ್ನದ ಶುಭ ಮುಹೂರ್ತದಲ್ಲಿ ಸಪರಿವಾರ ಶ್ರೀ ಶರಭೇಶ್ವರ ದೇವರಿಗೆ ಪರಿಕಲಶ ಸಹಿತ ಬ್ರಹ್ಮಕಲಶಾಭಿಷೇಕವು ವೇ|ಮೂ| ದಿನೇಶಕೃಷ್ಣ ತಂತ್ರಿಗಳ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು.
ಕಾರ್ಯಕ್ರಮದಲ್ಲಿ ಪುಣ್ಯಾಹ, ಗಣಪತಿ ಹವನ, ಕವಾಟೋದ್ಘಾಟನೆ, ನೀರಾಂಜನ ದರ್ಶನ, ತೈಲಾಭಿಷೇಕ, ಪಂಚಾಮೃತಾಭಿಷೇಕ, ಪ್ರಾಯಶ್ಚಿತ ಹೋಮಗಳ ಕಲಶಾಭಿಷೇಕ, ತತ್ವ ಕಲಶಾಭಿಷೇಕ, ಶ್ರೀ ಗಣಪತಿ, ಮಹಿಷಮರ್ಧಿನಿ, ವೀರಾಂಜನೇಯ ದೇವರಿಗೆ ಪರಿಕಲಶ ಸಹಿತ ಬ್ರಹ್ಮಕಲಶಾಭಿಷೇಕ, ಶ್ರೀ ರುದ್ರ ಯಾಗ, ಪ್ರಸನ್ನ ಪೂಜೆ, ಅವಸೃತ ಬಲಿ, ಪಲ್ಲ ಪೂಜೆ, ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ, ಮಂತ್ರಾಕ್ಷತೆ ನೆರವೇರಿತು.
ದೇವಸ್ಥಾನದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ, ಅರ್ಚಕ ಜಯರಾಮ ಕಾರಂತ, ಪುರೋಹಿತ ವಿಜಯಕೃಷ್ಣ ಐತಾಳ್ ಪೂಂಜೂರು ಹಾಗೂ ವೈದಿಕ ವೃಂದ ಧಾರ್ಮಿಕ ವಿಧಿ ನೆರವೇರಿಸಿದರು.
ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಎಂ.ಎಸ್.ಶೆಟ್ಟಿ ಸರಪಾಡಿ, ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಪ್ರಧಾನ ಕಾರ್ಯದರ್ಶಿ ನಾರಾಯಣ ಶೆಟ್ಟಿ ಹೊಳ್ಳರಗುತ್ತು, ಕಾರ್ಯದರ್ಶಿ ರಾಧಾಕೃಷ್ಣ ರೈ ಕೊಟ್ಟುಂಜ, ಕೋಶಾಽಕಾರಿ ಅರುಣ ಐತಾಳ್, ಬ್ರಹ್ಮಕಲಶ ಸಮಿತಿಯ ಅಧ್ಯಕ್ಷ ಸದಾಶಿವ ಶೆಟ್ಟಿ ಕನ್ಯಾನ, ಸಂಚಾಲಕರಾದ ಸಂಜೀವ ಪೂಜಾರಿ ಕಟ್ಟದಡೆ, ಡಾ| ರಾಜರಾಮ್ ಕೆ.ಬಿ, ಪ್ರಧಾನ ಕಾರ್ಯದರ್ಶಿ ಸರಪಾಡಿ ಅಶೋಕ್ ಶೆಟ್ಟಿ, ಕಾರ್ಯದರ್ಶಿ ಚೇತನ್ ಅಮೀನ್ ಬಜ, ಮೊಕ್ತೇಸರರಾದ ಉಮೇಶ್ ಆಳ್ವ ಕೊಟ್ಟುಂಜ, ವಿಠಲ್ ಎಂ.ಆರುಮುಡಿ, ಚಂದ್ರಶೇಖರ ಶೆಟ್ಟಿ ಹೊಳ್ಳರಗುತ್ತು, ದಯಾನಂದ ಪೂಜಾರಿ ಕೋಡಿ, ಕೊರಗಪ್ಪ ಗೌಡ ಪಠಣ, ಸುರೇಂದ್ರ ಪೈ, ಗಿರಿಧರ ಎಸ್.ಮಠದಬೆಟ್ಟು, ದಯಾವತಿ ಎಸ್. ಮೊದಲಾದವರು ಉಪಸ್ಥಿತರಿದ್ದರು.