ಬಂಟ್ವಾಳ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ 75ನೇ ವರ್ಷದ ಗಣರಾಜ್ಯೋತ್ಸವವನ್ನು ಬಂಟ್ವಾಳ ತಾಲೂಕಾಡಳಿತದ ವತಿಯಿಂದ ಬಿ.ಸಿ.ರೋಡಿನಲ್ಲಿ ಆಚರಿಸಲಾಯಿತು.
ತಾಲೂಕು ಆಡಳಿತ ಸೌಧದ ಮುಂಭಾಗ ತಹಶೀಲ್ದಾರ್ ಎಸ್.ಬಿ. ಕೂಡಲಗಿ ಧ್ವಜಾರೋಹಣ ನೆರವೇರಿಸಿದರು. ಶಾಸಕ ರಾಜೇಶ್ ನಾಕ್ ಮತ್ತಿತರ ಗಣ್ಯರು ಉಪಸ್ಥಿತರಿದ್ದು ವಿವಿಧ ತುಕುಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.
ಬಳಿಕ ಬಿ.ಸಿ.ರೋಡಿನ ಅಂಬೇಡ್ಕರ್ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಕ್ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ತಹಶೀಲ್ದಾರ್ ಎಸ್.ಬಿ. ಕೂಡಲಗಿ ಗಣರಾಜ್ಯೋತ್ಸವ ಸಂದೇಶ ನೀಡಿ ಇಂದು ಭಾರತೀಯರಾದ ನಾವು ಹೆಮ್ಮೆ ಪಡುವ ದಿನ. ವಿಶ್ವದಲ್ಲಿಯೇ ಮಾದರಿಯಾದ ಸಂವಿಧಾನ ಭಾರತದ್ದಾಗಿದ್ದು ಸಂವಿಧಾನದಡಿಯಲ್ಲಿ ಎಲ್ಲಾ ನಾಗರಿಕರು ಸಮಾನವಾದ ಜೀವನ ಮಾಡುವ ಅವಕಾಶ ಸಿಕ್ಕಿದೆ ಎಂದು ತಿಳಿಸಿದರು.
ಶಿಕ್ಷಣ ಸಂಯೋಜಕಿ ಸುಜಾತ ಕುಮಾರಿ ಪ್ರಧಾನ ಭಾಷಣ ಮಾಡಿ ಆಚರಣೆಗಳು ನಮ್ಮನ್ನು ಬೆಸೆಯುವ ಕೊಂಡಿಯಾಗಿದೆ. ಎಲ್ಲಾ ದೇಶಗಳ ಸಂವಿಧಾನವನ್ನು ಕ್ರೋಡಿಕರಿಸಿ ಅದರ ಮುಖ್ಯ ಅಂಶಗಳನ್ನು ನಮ್ಮ ಸಂವಿಧಾನದಲ್ಲಿ ಅಳವಡಿಸಲಾಗಿದೆ ಎಂದು ತಿಳಿಸಿದರು.
ತೋಟಗಾರಿಕಾ ಇಲಾಖಾ ಹಿರಿಯ ಸಹಾಯಕ ನಿರ್ದೇಶಕ ಜೋ ಪ್ರದೀಪ್ ಡಿಸೋಜಾ, ನಿವೃತ್ತ ಯೋಧರ ಸಂಘದ ಅಧ್ಯಕ್ಷ ವೆಂಕಪ್ಪ ಗೌಡ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ನಿವೃತತ ಯೋಧರಾದ ಬಾಲಕೃಷ್ಣ ರೈ, ಮೋನಪ್ಪ ಪೂಜಾರಿ, ಕರಿಬಸಪ್ಪ, ಕರುಣಾಕರ ಎಸ್., ವೆಂಕಪ್ಪ ಗೌಡ ಅವರನ್ನು ಸನ್ಮಾನಿಸಲಾಯಿತು. ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಅಭಿನಂದಸಲಾಯಿತು. ಉಪತಹಶೀಲ್ದಾರ್ ನವಿನ್ ಬೆಂಜನಪದವುನ ಕಾಐಕ್ರಮ ನಿರೂಪಿಸಿದರು. ಕಂದಾಯ ಇಲಾಖೆಯ ಶ್ರೀಕಲಾ ಸಾಧಕ ವಿದಗ್ಯಾರ್ಥಿಗಳ ಪಟ್ಟಿ ವಾಚಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ವಂದಿಸಿದರು.
ಪಥಸಂಚಲನ: ರಾಷ್ಟ್ರಧ್ವಜರೋಹಣದ ಬಳಿಕ ಆಕರ್ಷಕ ಪಥ ಸಂಚಲ ನಡೆಯಿತು. ಪಥಸಂಚಲನದಲ್ಲಿ ನಿವೃತ್ತ ಯೋಧರ ತಂಡ ಭಾಗವಹಿಸಿ ಗಮನ ಸೆಳೆಯಿತು. ಪೊಲೀಸ್, ಗೃಹರಕ್ಷಕ ದಳ, ವಿದ್ಯಾರ್ಥಿಗಳ ತಂಡ ಪಥಸಂಚಲನದಲ್ಲಿ ಭಾಗವಹಿಸಿತ್ತು.