ಬಂಟ್ವಾಳ: ಇಲ್ಲಿನ ತಾಲೂಕು ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್ ಬಿ ಕೂಡಲಗಿ ಅವರು ಭಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ತಹಶೀಲ್ದಾರರಾಗಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರನ್ನು ಗೌರವಿಸಿ ಬೀಳ್ಕೊಡಲಾಯಿತು.
ಬಿ.ಸಿ. ರೋಡಿನಲ್ಲಿರುವ ತಾಲೂಕು ಆಡಳಿತ ಸೌಧದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ನೂತನ ತಹಶೀಲ್ದಾರ್ ಅರ್ಚನಾ ಭಟ್ ರವರು ಮಾತನಾಡಿ ಹೊಸತನ್ನು ಕಲಿಯುವ ಛಲ ಮತ್ತು ಧೈರ್ಯ ಇದ್ದರೆ ಯಾವುದೇ ಕರ್ತವ್ಯವನ್ನಾದರೂ ಸುಲಭವಾಗಿ ನಿರ್ವಹಿಸಬಹುದು. ತಾಲೂಕು ಆಡಳಿತದ ಯಶಸ್ಸಿಗೆ ಎಲ್ಲರೂ ಒಂದಾಗಿ ದುಡಿಯೋಣ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಎಸ್.ಬಿ. ಕೂಡಲಗಿ ಅವರು ಬಂಟ್ವಾಳ ತಾಲೂಕಿನ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಅತ್ಯುತ್ತಮವಾದ ಸಹಕಾರ ನೀಡಿದ್ದರಿಂದಾಗಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಯಿತು ಎಂದರು. ಬಂಟ್ವಾಳ ತಾಲೂಕು ಕಛೇರಿ ಉಪತಹಶೀಲ್ದಾರರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು, ಕಚೇರಿ ಸಿಬ್ಬಂದಿಗಳು, ಗ್ರಾಮ ಸಹಾಯಕರು ತಹಶೀಲ್ದಾರರಿಗೆ
ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಉಪತಹಸೀಲ್ದಾರ್ ನರೇಂದ್ರನಾಥ ಮಿತ್ತೂರು, ರಾಜೇಶ್ ನಾಯ್ಕ್, ದಿವಾಕರ ಮುಗುಳಿಯ ಕಂದಾಯ ನಿರೀಕ್ಷಕರಾದ ವಿಜಯ್ ಆರ್, ಜನಾರ್ಧನ ಜೆ,
ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಉಪತಹಸೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು.
ವಿಟ್ಲ ಹೋಬಳಿ ಕಂದಾಯ ನಿರೀಕ್ಷಕರಾದ ಪ್ರಶಾಂತ್ ಶೆಟ್ಟಿ ವಂದಿಸಿದರು.