ಬಂಟ್ವಾಳ: ನಾವೂರು ಗ್ರಾಮದ ಶ್ರೀ ಸುಬ್ರಾಯ
ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನದಲ್ಲಿ ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಕ್ಷೇತ್ರದ ತಂತ್ರಿಗಳಾದ ನಡ್ವಾಂತಾಡಿ ಶ್ರೀಪಾದ ಪಾಂಗಣ್ಣಯರ ನೇತೃತ್ವದಲ್ಲಿ ನಡೆಯಿತು.
Advertisement
ಸಂಜೆ ಸ್ವಸ್ತಿ ಪುಣ್ಯಾಹ ವಾಚನ, ದುರ್ಗಾ ನಮಸ್ಕಾರ ಪೂಜೆ, ಮಹಾಪೂಜೆ, ಉತ್ಸವ ಬಲಿ, ವಸಂತಕಟ್ಟೆ ಪೂಜೆ ನಡೆಯಿತು. ಊರ ಪರವೂರ ಭಕ್ತರು ಭಾಗವಹಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
Advertisement