ಬಂಟ್ವಾಳ: ಸಾಮಾಜಿಕ ಜಾಲಾತಾಣ ವಾಟ್ಸಪ್ ಮೂಲಕ ಬಂದ ಮೇಸ್ಜ್ನ ಮೇರೆಗೆ ಷೇರ್ ಟ್ರೇಡಿಂಗ್ನಲ್ಲಿ ಹೂಡಿಕೆ ಮಾಡಿ ಗ್ರಾಹಕರೊಬ್ಬರು ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿಸಿಕೊಂಡ ಘಟನೆ ಇಲ್ಲಿನ ಬಿ.ಮೂಡ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿ
ಸುಬ್ರಾಯ ರಾಮ ಮಡಿವಾಳ 18.92 ಲಕ್ಷ ರೂಪಾಯಿ ಕಳಕೊಂಡಿದ್ದು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸುಬ್ರಾಯ ಮಡಿವಾಳರ ಮೊಬೈಲ್ಗೆ 2023 ರ ನವೆಂಬರ್ ತಿಂಗಳಿನಲ್ಲಿ ಷೇರ್ ಟ್ರೇಡಿಂಗ್ ಗಾಗಿ ಹೂಡಿಕೆ ಮಾಡಿ ಲಾಭ ಪಡೆಯುವಂತೆ ವಾಟ್ಸ್ಪ್ ಮೂಲಕ ಮೇಸೆಜ್ಗೆ ಬಂದಿತ್ತು. ಅದಕ್ಕೆ ಸ್ಪಂದಿಸಿ ಅಪರಿಚಿತ ಆರೋಪಿಗಳು ನೀಡಿದ ಸೂಚನೆಗಳನ್ನು ಅನುಸರಿಸಿ ಜ.9 ರಿಂದ ಈವರೆಗೆ ಹಂತ ಹಂತವಾಗಿ ಆರೋಪಿಗಳು ತಿಳಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 18,92,200 ರೂ ಹಣವನ್ನು ಪಾವತಿಸಿದ್ದಾರೆ. ಆದರೆ ಆರೋಪಿಗಳು ಲಾಭಾಂಶವನ್ನು ನೀಡದೆ, ಪಾವತಿಸಿದ ಹಣವನ್ನೂ ವಾಪಾಸ್ಸು ನೀಡದೆ ವಂಚಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದು ಪ್ರಕರಣ ದಾಖಲಾಗಿದೆ.
Advertisement