
ಬಂಟ್ವಾಳ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬಂಟ್ವಾಳ ಇದರ ಆಶ್ರಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಯುಷ್ಮಾನ್ ಆರೋಗ್ಯ ಮಂದಿರ ಜಕ್ರಿಬೆಟ್ಟುವಿನಲ್ಲಿ ಉದ್ಘಾಟನೆಗೊಂಡಿತು.
ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯರಾದ ಮೀನಾಕ್ಷಿ ಜೆ. ಗೌಡ, ಜನಾರ್ದನ, ಜಯಂತ್ ಕುಲಾಲ್ ಸಮುದಾಯ ಆರೋಗ್ಯ ಅಧಿಕಾರಿ ಜಯಂತಿ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

