ಬಂಟ್ವಾಳ: ಬೊಳ್ಳಾಯಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಾರಿ ಸಂಘ ಇದರ ಸ್ಥಳಾಂತರಗೊಂಡ ಬೋಳಂತೂರು ಶಾಖೆಯ ಶುಭಾರಂಭ ಕಾರ್ಯಕ್ರಮ ಫೆ. 22ರಂದು ಗುರುವಾರ ಬೆಳಿಗ್ಗೆ 10 ಗಂಟೆಗೆ ಬೋಳಂತ್ತೂರಿನ ಉತ್ತಮ ನಗರದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಮೀಣ ಭಾಗವಾದ ಸಜೀಪಮೂಡದಲ್ಲಿ ಆರಂಭಗೊಂಡ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇಂದು 12 ಶಾಖೆಗಳನ್ನೊಳಗೊಂಡು ಗ್ರಾಹಕರಿಗೆ ಅತ್ಯುತ್ತವಾದ ಸೇವೆಯನ್ನು ನೀಡುತ್ತಿದೆ. ಸಹಕಾರಿ ಕ್ಷೇತ್ರದಲ್ಲಿ ಹೊಸತನದ ಛಾಪನ್ನು ಮೂಡಿಸಿಕೊಂಡು ಮುನ್ನಡೆಯುತ್ತಿರುವ ಸಂಘ ಸಹಕಾರಿ ಕ್ಷೇತ್ರದಲ್ಲಿ ಕಡಿಮೆಯ ಅವಧಿಯಲ್ಲಿ ಸಾಧಿಸಿದ ಸಾಧನೆಗೆ ಅನೇಕ ಪ್ರಶಸ್ತಿಗಳನ್ನು ಮುಡಿಗೇರಿಸಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಖೆಗಳನ್ನು ವಿಸ್ತರಿಸಿಕೊಂಡು ಗ್ರಾಹಕ ಸ್ನೇಹಿ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಅವರು ತಿಳಿಸಿದ್ದಾರೆ.
Advertisement