
ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ಚಂಡಿಕಾ ಪರಮೇಶ್ವರೀ ದೇವಸ್ಥಾನದ ಜಾತ್ರಾಮಹೋತ್ಸವದ ಪ್ರಯುಕ್ತ ಗುರುವಾರ ಬೆಳಿಗ್ಗೆ ಶ್ರೀ ದೇವರ ದರ್ಶನ ಬಲಿ ಉತ್ಸವ ನಡೆಯಿತು. ಬಳಿಕ ಬಟ್ಟಲು ಕಾಣಿಕೆ ನಡೆದು ರಾಜಾಂಗಣ ಪ್ರಸಾದ ವಿತರಿಸಲಾಯಿತು. ಬಳಿಕ ನವಕ ಕಲಶಾಭಿಷೇಕ, ಮಹಾಪೂಜೆ, ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಿತು. ಹರಕೆ ಬಂದ ಸೀರೆಗಳನ್ನು ಏಲಂ ಮಾಡಲಾಯಿತು.


ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಲೋಕನಾಥ ಶೆಟ್ಟಿ, ಕಾರ್ಯದರ್ಶಿ ಇಂದೇಶ್, ಆಡಳಿತ ಸಮಿತಿ ಸದಸ್ಯರು, ಊರ ಪರವೂರ ಭಕ್ತರು ಭಾಗವಹಿಸಿದ್ದರು.
