
ಬಂಟ್ವಾಳ: ಕರ್ಮ ಯೋಗ ಮತ್ತು ಭಕ್ತಿಯೋಗದ ಮೂಲಕ ದೇವರನ್ನು ಸುಲಭದಲ್ಲಿ ಒಲಿಸಿಕೊಳ್ಳಲು ಸಾಧ್ಯವಿದೆ ಎಂದು ಧರ್ಮಸ್ಥಳ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ಅವರು ನೂತನವಾಗಿ ನಿರ್ಮಾಣಗೊಂಡ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠೆ, ಅಷ್ಟಬಂಧ, ಬ್ರಹ್ಮಕಲಶಾಭಿಷೇಕ ಮತ್ತು ಧ್ವಜಸ್ಥಂಭ ಪ್ರತಿಷ್ಠೆ ಮತ್ತು ಜಾತ್ರಾ ಮಹೋತ್ಸವದ ಪ್ರಯುಕ್ತ ನಡೆದ ಪ್ರಥಮ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಮಾನವ ಬದುಕಿನಲ್ಲಿ ಪುಣ್ಯದ ಉತ್ಕರ್ಷ ಆದಾಗ ಭಾಗ್ಯದ ಬಾಗಿಲು ತೆರೆಯುತ್ತದೆ. ಆಧ್ಯಾತ್ಮದೊಳಗೆ ಎಲ್ಲವೂ ಇದೆ. ಮಾನವನನ್ನು ಮಾಧವನನ್ನಾಗಿ ಮಾಡುವ ಶಕ್ತಿ ಆಧ್ಯಾತ್ಮಕ್ಕಿದೆ ಎಂದು ತಿಳಿಸಿದರು.


ಬೆಂಗಳೂರಿನ ಉದ್ಯಮಿ ಎರಕಳ ಬಿ. ರಘುನಾಥ ಸೋಮಯಾಜಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಎ.ಜೆ. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ
ಉದ್ಯಮಿ ಜಗನ್ನಾಥ ಚೌಟ ಬದಿಗುಡ್ಡೆ, ಕೆ. ಎಂ.ಎಫ್ ಅಧ್ಯಕ್ಷ ಸುಚರಿತ ಶೆಟ್ಟಿ, ಅರುಣ್ ಕುಮಾರ್ ಪುತ್ತಿಲ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ಕೋಶಾಧಿಕಾರಿ ಪದ್ಮರಾಜ್ ಆರ್., ನ್ಯಾಯವಾದಿ ಅಶ್ವನಿ ಕುಮಾರ್ ರೈ, ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಮೇಶ್ ಉಪಧ್ಯಾಯ, ಕನಪಾಡಿ ದೈವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಮಾನಾಥ ರೈ, ಜ್ಯೋತಿಷಿ, ಅನಿಲ್ ಪಂಡಿತ್
ಉದ್ಯಮಿ ಪಿಯೂಸ್ ಎಲ್.ರೋಡ್ರಿಗಸ್, ಕರಿಯಂಗಳ ಗ್ರಾ.ಪಂ. ಮಾಜಿ ಅಧ್ಯಕ್ಷ ಚಂದ್ರಹಾಸ ಪಲ್ಲಿಪ್ಪಾಡಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಭಾಗವಹಿಸಿದ್ದರು. ದೇವಸ್ಥಾನದ ಬ್ರಹಕಲಶೋತ್ಸವ ಹಾಗೀ ಜೀಣೋದ್ಧಾರ ಸಮಿತಿ ಧ್ಯಕ್ಷ
ಚಂದ್ರಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು. ಉಮೇಶ್ ರೆಂಜೋಡಿ ಸ್ವಾಗತಿಸಿದರು, ಕಿಶೋರ್ ಭಂಡಾರಿ ಬೆಳ್ಳೂರು ಕಾರ್ಯಕ್ರಮ ನಿರೂಪಿಸಿದರು.
