ಬಂಟ್ವಾಳ: ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದಲ್ಲಿ ನಡೆಯುತ್ತಿರುವ ಪುನಃ ಪ್ರತಿಷ್ಠೆ, ಅಷ್ಟಬಂಧ, ಬ್ರಹ್ಮಕಲಶಾಭಿಷೇಕ ಮತ್ತು ಧ್ವಜಾಸ್ತಂಭ ಪ್ರತಿಷ್ಠೆ ಮತ್ತು ಜಾತ್ರಾಮಹೋತ್ಸವದ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿದರು.
ದೇವರ ದರ್ಶನ ಪಡೆದ ಅವರು ದೇವಸ್ಥಾನ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೇವಾಲಯ ನಿರ್ಮಾಣ ಕಾರ್ಯ ಅತ್ಯಂತ ಸುಂದರವಾಗಿ ಮೂಡಿಬಂದಿದ್ದು ಚಂದ್ರಪ್ರಕಾಶ್ ಶೆಟ್ಟಿಯವರ ನೇತೃತ್ವದ ತಂಡದ ಕಾರ್ಯ ಶ್ಲಾಘನೀಯ ಎಂದರು
ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ಶ್ರೀ ಕ್ಷೇತ್ರದ ವತಿಯಿಂದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಗೌರವಿಸಿದರು. ಈ ಸಂದರ್ಭ ಮಾಜಿ ಸಚಿವ ಬಿ. ರಮನಾಥ ರೈ, ಪ್ರಮುಖರಾದ ರವಿಶಂಕರ್ ಶೆಟ್ಟಿ ಬಡಾಜೆ, ಅಶ್ವನಿ ಕುಮಾರ್ ರೈ, ಪದ್ಮರಾಜ್ ಆರ್, ಇನಾಯತ್ ಅಲಿ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ದೇವಸ್ಥಾನದ ವಿವಿಧ ಸಮಿತಿಯ ಪದಾಧಿಕಾರಿಗಳು, ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.