ಬಂಟ್ವಾಳ: ತಾಲೂಕಿನ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೊತ್ಸವದ ಪ್ರಥಮ ದಿನದಂದು ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ನೇರವೇರಿತು. ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರ ಸಂಚಯಗಿರಿ ಬಂಟ್ವಾಳದ ಪ್ರೊ.ತುಕರಾಮ್ ಪೂಜಾರಿಯವರು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಮಹಾದೇವ ಗೌಡ ಮುದ್ದಾಜೆ, ತುಕರಾಮ್ ಶೆಟ್ಟಿ, ಶ್ರೀಹರಿ ಭಟ್, ರಮಾನಂದ ಭಟ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸದಾನಂದ ಗೌಡ ಮತ್ತಾವೂ , ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ರಾಜೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಗೌಡ ಕಾರಂಬಡೆ, ಪ್ರಧಾನ ಅರ್ಚಕರು ರಾಮಚಂದ್ರ ಭಟ್, ದಿನೇಶ್ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಚೌಟ, ರಾಯಿ ಗ್ರಾಮ ಪಂಚಾಯತಿ ಅಧ್ಯಕ್ಷ ಸಂತೋಷ್ ಕುಮಾರ್, ಭಜನಾ ಮಂಡಳಿ ಅಧ್ಯಕ್ಷ ರಾಜೇಶ್ ಶಿವನಗರ, ಸಮಿತಿ ಕಾರ್ಯದರ್ಶಿಗಳಾದ ಪ್ರದೀಪ್ ಮಿಯಾಲು ಸಮಿತ್ ಶಿವನಗರ, ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಶ್ಮಿತ್ ಶೆಟ್ಟಿ ಸ್ವಾಗತಿಸಿದರು. ವೇದಿಕೆ ಸಮಿತಿ ಸಂಚಾಲಕ ದಿನೇಶ್ ಸುವರ್ಣ ನಿರೂಪಿಸಿದರು.