
ಬಂಟ್ವಾಳ: ಜಿಲ್ಲೆಯ ಪ್ರಸಿದ್ದ ದೇವಸ್ಥಾನವಾದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ದೇವಸ್ಥಾನದಲ್ಲಿ ಮಹಾರಥೋತ್ಸವ ನಾಳೆ (ಫೆ.27) ನಡೆಯಲಿದೆ.

ಫೆ. 24 ರಂದು ವಾರ್ಷಿಕ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು ಇಂದು ರಾತ್ರಿ ಶ್ರೀ ದೇವರ ಬಲಿ, ಪಾಲಕಿ ಉತ್ಸವ ಹಾಗೂ ರಥ ಬೀದಿಯಲ್ಲಿ ಸಾಗಿ ಕಟ್ಟೆ ಉತ್ಸವ ನಡೆಯಲಿದೆ. ನಾಳೆ ಬೆಳಿಗ್ಗೆ 7.30ಕ್ಕೆ ಅಥರ್ವ ಶೀರ್ಷ ಹೋಮ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಶ್ರೀ ದೇವರ ರಥಾರೋಹಣ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 7ಕ್ಕೆ ಮಹಾರಥೋತ್ಸವ, ಸುಡುಮದ್ದು ಪ್ರದರ್ಶನ, ಶ್ರೀ ದೇವರ ಬಲಿ ಉತ್ಸವ ನಡೆಯಲಿದೆ. ಫೆ. 28 ರಂದು ರಾತ್ರಿ 7 ಕ್ಕೆ ಶ್ರೀ ದೇವರ ಬಲಿ ಹೊರಟು ಅವಭೃತ ಸ್ನಾನ, ಧ್ವಜಾವರೋಹಣ ನಡೆಯಲಿದೆ.

ರಾತ್ರಿ 11 30ಕ್ಕೆ ಮಾಗಣೆಯ ಶ್ರೀ ನಾಲ್ಕೈತ್ತಾಯ ದೈವದ ನೇಮೋತ್ಸವ ಜರುಗಲಿದೆ. ಫೆ. 29 ರಂದು ಸಂಪ್ರೋಕ್ಷಣೆ ಮತ್ತು ಮಂತ್ರಾಕ್ಷತೆ ನಡೆಯಲಿದೆ.
