Advertisement
ಬಂಟ್ವಾಳ: ಇತಿಹಾಸ ಪ್ರಸಿದ್ದ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ದೇವಸ್ಥಾನದ ಮಹಾರಥೋತ್ಸವ ಮಂಗಳವಾರ ರಾತ್ರಿ ನಡೆಯಿತು.
ಬೆಳಿಗ್ಗೆ ದೇವಸ್ಥಾನದಲ್ಲಿ ಅಥರ್ವ ಶೀರ್ಷ ಹೋಮ, ಮಧ್ಯಾಹ್ನ ಮಹಾಪೂಜೆ, ಶ್ರೀ ದೇವರ ರಥಾರೋಹಣ, ಅನ್ನಸಂತರ್ಪಣೆ ನಡೆಯಿತು. ರಾತ್ರಿ ವಿಜ್ರಂಭಣೆಯಿಂದ ನಡೆದ ಮಹಾರಥೋತ್ಸವದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು. ಸುಡುಮದ್ದು ಪ್ರದರ್ಶನ ಆಕರ್ಷಣೀಯವಾಗಿತ್ತು. ಬಳಿಕ ದೇವಳದ ಅಂಗಣದಲ್ಲಿ ಶ್ರೀ ದೇವರ ಬಲಿ ಉತ್ಸವ ನಡೆಯಿತು.
Advertisement