ಬಂಟ್ವಾಳ: ಇಲ್ಲಿನ ಪುರಸಭೆಯ ವತಿಯಿಂದ ಲಯನ್ಸ್ ಕ್ಲಬ್ ಬಿ.ಸಿ.ರೋಡ್, ತಾಲೂಕು ಆಸ್ಪತ್ರೆ ಬಂಟ್ವಾಳ, ಎ.ಜೆ. ವೈದ್ಯಕೀಯ ಕಾಲೇಜು ಆಸ್ಪತ್ರೆ ಮಂಗಳೂರು, ಸ್ವ ಸಹಾಯ ಸಂಘಗಳ ಒಕ್ಕೂಟಗಳು ಪುರಸಭೆ, ಬಂಟ್ವಾಳ ಬೀದಿ ಬದಿ ವ್ಯಾಪಾರಿಗಳ ಪಟ್ಟಣ ಮಾರಾಟ ಸಮಿತಿ ಇವರ ಸಹಯೋಗದೊಂದಿಗೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಪುರಸಭೆಯ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಶಿಬಿರವನ್ನು ಉದ್ಘಾಟಿಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಕೋಟ್ಯಾನ್, ತಾಲೂಕು ಆಸ್ಪತ್ರೆ ಬಂಟ್ವಾಳ ಇಲ್ಲಿನ ವೈದ್ಯಾಧಿಕಾರಿ ಡಾ. ಪುಷ್ಪಲತಾ, ಬೀದಿ ಬದಿ ವ್ಯಾಪಾರಿಗಳ ಸಂಘದ ಸದಸ್ಯ ಮಹಮ್ಮದ್ ಇಕ್ಬಾಲ್, ಸ್ವ ಸಹಾಯ ಸಂಘದ ಒಕ್ಕೂಟಗಳ ಅಧ್ಯಕ್ಷೆ ವಸಂತಿ ಉಪಸ್ಥಿತರಿದ್ದರು.
ಶಿಬಿರದಲ್ಲಿ ಎ. ಜೆ ವೈದ್ಯಕೀಯ ಕಾಲೇಜು ಆಸತ್ರೆ ಮಂಗಳೂರು ಇಲ್ಲಿನ ತಜ್ಞ ವೈದ್ಯರು ಹಾಜರಿದ್ದು, ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆಯನ್ನು ನಡೆಸಿದರು. ಶಿಬಿರದಲ್ಲಿ ಕಣ್ಣಿನ ತಪಾಸಣೆ ನಡೆಸಿ ಕನ್ನಡಕ ಅಗತ್ಯವಿದ್ದವರಿಗೆ ಪುರಸಭೆಯಿಂದ ಉಚಿತ ಕನ್ನಡಕ ವಿತರಿಸಲಾಯಿತು. ಮಂಗಳ ಸ್ವಾಗತಿಸಿ, ಗೀತಾ ವಂದಿಸಿದರು. ಸಮುದಾಯ ಸಂಘಟಕಿ ಉಮಾವತಿ ಕಾರ್ಯಕ್ರಮ ನಿರೂಪಿಸಿದರು.