ಬಂಟ್ವಾಳ: ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಓಬಿಸಿ ಮೋರ್ಚಾದ ಮಂಡಲ ಅಧ್ಯಕ್ಷರಾಗಿ ಗಣೇಶ್ ಸುವರ್ಣ ತುಂಬೆ ನೇಮಕಗೊಂಡಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಮಂಗಳೂರು ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರನ್ನಾಗಿ ಗಣೇಶ್ ಸುವರ್ಣ ಅವರನ್ನು ಆಯ್ಕೆಗೊಳಿಸಿದ್ದಾರೆ. ಅವರು ಬಂಟ್ವಾಳ ತಾಲೂಕು ಪಂಚಾಯತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಮಂಗಳೂರು ಮಂಡಲದ ಕಾರ್ಯದರ್ಶಿಯಾಗಿ, ಬಿಜೆಪಿ ಪುದು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ವಿವಿಧ ಸಾಮಾಜಿಕ ಸಂಘಟನೆಗಳಲ್ಲೂ ಸಕ್ರಿಯರಾಗಿದ್ದಾರೆ.
Advertisement
Advertisement
Advertisement
Advertisement