ಬಂಟ್ವಾಳ: ಮೂಡೂರು ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ ಇದರ ಆಶ್ರಯದಲ್ಲಿ ಬಂಟ್ವಾಳ ಕಂಬಳ ಎಂದೇ ಪಸಿದ್ದಿ ಪಡೆದಿರುವ 13ನೇ ವರ್ಷದ ಹೊನಲು ಬೆಳಕಿನ ಮೂಡೂರು ಪಡೂರು ಜೋಡುಕರೆ ಬಯಲು ಕಂಬಳಕ್ಕೆ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ಶನಿವಾರ ಬೆಳಿಗ್ಗೆ ಚಾಲನೆ ನೀಡಲಾಯಿತು.
ಅಲ್ಲಿಪಾದೆ ಸಂತ ಅಂತೋನಿ ಧರ್ಮಕೇಂದ್ರದ ಧರ್ಮಗರುಗಳಾದ ವಂದನೀಯ ಫೆಡ್ರಿಕ್ ಮೊಂತೆರೋ ಕಂಬಳ ಉದ್ಘಾಟಿಸಿದರು.
ಕಂಬಳ ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ ಕರೆ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿ ನಮ್ಮ ಕಾರ್ಯಕ್ರಮ ಎಲ್ಲಾ ಜಾತಿ ಧರ್ಮ ವರ್ಗದ ಜನರು ಬರುವಂತೆ ಕೈ ಬೀಸಿ ಕರೆಯುವಂತಿರಬೇಕು ಎಂದರು. ಕಂಬಳ ವೀಕ್ಷಿಸಲು ಬರುವ ಅತಿಥಿಗಳು, ಕಂಬಳಾಭಿಮಾನಿಗಳಿಗೆ ಉತ್ತಮ ವ್ಯವಸ್ಥೆಯನ್ನು ಮಾಡಿಕೊಟ್ಟು ಇದೊಂದು ಮಾದರಿ ಕಂಬಳವಾಗಲು ಸಹಕರಿಸಬೇಕು ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಉದ್ಯಮಿ ರಘುನಾಥ ಸೋಮಯಾಜಿ, ನಮ್ಮ ಕುಡ್ಲ ವಾಹಿನಿಯ ನಿರ್ದೇಶಕ ಲೀಲಾಕ್ಷ ಕರ್ಕೆರಾ, ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಿ.ಎಚ್ ಖಾದರ್
ಮಾಜಿ ಮೇಯರ್ ಶಶಿಧರ್ ಹೆಗ್ಡೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮಾಣಿ ಸಾಗು ಉಮೇಶ್ ಶೆಟ್ಟಿ, ಲಿಯೋ ಫೆರ್ನಾಂಡೀಸ್ ಸರಪಾಡಿ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಉದ್ಯಮಿ ಬಾಲಕೃಷ್ಣ ಶೆಟ್ಟಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಜಯಪ್ರಕಾಶ್ ರೈ, ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಅಬ್ಬಾಸ್ ಅಲಿ, ಕಾಂಗ್ರೆಸ್ ಪರಿಶಿಷ್ಟ ಪಂಗಡ ಜಿಲ್ಲಾಧ್ಯಕ್ಷ ನಾರಾಯಣ ನಾಯ್ಕ್, ಉದ್ಯಮಿ ಪುರುಷೋತ್ತಮ ಶೆಟ್ಟಿ, ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಜೋಕಿಂ ಡಿಸೊಜಾ
ಐತಪ್ಪ ಆಳ್ವ ಸುಜೀರುಗುತ್ತು, ತಾ.ಪಂ. ಮಾಜಿ ಸದಸ್ಯ ಪ್ರವೀಣ್ ಆಳ್ವ, ಸಂಚಾಲಕ ಪದ್ಮಶೇಖರ ಜೈನ್, ಕಾರ್ಯಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ರಾಜೀವ ಶೆಟ್ಟಿ ಎಡ್ತೂರು, ಉಪಾಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಮಾಯಿಲಪ್ಪ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ಕಂಬಳ ಸಮಿತಿ ಅಧ್ಯಕ್ಷ ಅಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್ ಸ್ವಾಗತಿಸಿದರು.
ಬಾಲಕೃಷ್ಣ ಆಳ್ವ ಕಾರ್ಯಕ್ರಮ ನಿರೂಪಿಸಿದರು