ಬಂಟ್ವಾಳ: ಕನ್ನಡ ಭವನ ಮತ್ತು ಗ್ರಂಥಾಲಯ (ರಿ )ಕನ್ನಡ ಭವನ ಪ್ರಕಾಶನ ಕಾಸರಗೋಡು ಮತ್ತು ಕಥಾಬಿಂದು ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಕಥಾಬಿಂದು ಪ್ರಕಾಶನ ಮಂಗಳೂರು ಇದರ ವತಿಯಿಂದ ಪಯಸ್ವಿನಿ ಪ್ರಶಸ್ತಿ 2024 ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕನ್ನಡ ಭವನ ಕಾಸರಗೋಡಿನಲ್ಲಿ ಮಾ.10 ರಂದು ಭಾನುವಾರ 10 ಗಂಟೆಗೆ ನಡೆಯಲಿರುವ ಕೇರಳಮತ್ತು ಕರ್ನಾಟಕ ಕನ್ನಡ ಸಂಸ್ಕೃತಿ ಗಡಿನಾಡ ಉತ್ಸವ -2024 ರಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ
ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿಪ್ರದಾನ ನಡೆಯಲಿದೆ. ಕರ್ನಾಟಕ ಹಾಗೂ ಕೇರಳದ ಗಣ್ಯರಾದ ಪಿ.ವಿ.ಪ್ರದೀಪ ಕುಮಾರ್ , ಹಿರಿಯ ಕವಿಗಳಾದ ವಿ.ಜಿ.ಕುಳಮರ್ವ,ರಾಧಾಕೃಷ್ಣ ಉಳಿಯತಡ್ಕ ಮೊದಲಾದವರ ಉಪಸ್ಥಿತಿಯಲ್ಲಿ ಕವಿಗೋಷ್ಠಿ ಹಾಗೂ ವಿವಿಧ ಕಾರ್ಯ ಕ್ರಮಗಳು ನಡೆಯಲಿವೆ ಎಂದು ಕನ್ನಡ ಭವನ ಅಧ್ಯಕ್ಷ ವಾಮನ ರಾವ್ ಬೇಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement