ಬಂಟ್ವಾಳ: ರಾಜ್ಯ ಸರ್ಕಾರ ಜಾರಿ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ಹಾಗೂ ಬಂಟ್ವಾಳ ತಾಲೂಕಿನ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಜಯಂತಿ ವಿ. ಪೂಜಾರಿ ನೇಮಕಗೊಂಡಿದ್ದಾರೆ.
Advertisement
Advertisement
Advertisement
ಮಾಜಿ ಸಚಿವ ಬಿ.ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ಜಯಂತಿ ವಿ.ಪೂಜಾರಿ ಅವರನ್ನು ಕರ್ನಾಟಕ ಸರ್ಕಾರ ನೇಮಕ ಮಾಡಿದೆ. ಜಯಂತಿ ಪೂಜಾರಿ ಅವರು ದ.ಕ.ಜಿಲ್ಲಾ ಕೆಡಿಪಿಯ ಮಾಜಿ ಸದಸ್ಯರಾಗಿದ್ದು ಪ್ರಸ್ತುತ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ, ದ.ಕ. ಜಿಲ್ಲಾ ಕಾಂಗ್ರೆಸ್ ಸದಸ್ಯರಾಗಿ, ಶಿವಗಿರಿ ಮಹಿಳಾ ಸಹಕಾರಿ ಬ್ಯಾಂಕ್ ನ ಸ್ಥಾಪಕಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯದ ಮಾಜಿ ಅಧ್ಯಕ್ಷರಾಗಿ, ಪ್ರಸ್ತುತ ಮಾಣಿ ವಲಯ ಜನಜಾಗೃತಿ ವೇದಿಕೆಯ ಸದಸ್ಯರಾಗಿರುವ ಜಯಂತಿ ಅವರು ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ
Advertisement