ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಎ.ಜೆ. ಆಸ್ಪತ್ರೆ ಮಂಗಳೂರು ಇವರ ಸಹಕಾರದೊಂದಿಗೆ 126ನೇ ರಕ್ತದಾನ ಶಿಬಿರ ಮಾ.17ರಂದು ಭಾನುವಾರ ಬೆಳಿಗ್ಗೆ 9 ರಿಂದ 1 ಗಂಟೆಯವರೆಗೆ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆಯಲಿದೆ.
Advertisement
ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಸ್. ವಿಜಯಪ್ರಸಾದ್ ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ ಮಂಗಳೂರಿನ ಜಪ್ಪು ಶ್ರೀ ಅಂಬಾಮಹೇಶ್ವರೀ ಭಜನಾ ಮಂದಿರದ ಶ್ರೀ ಸೀತಾರಾಮ ಎ ಭಾಗವಹಿಸುವರು. ಶಿಬಿರದಲ್ಲಿ ಹೆಚ್ಚಿನ ಸಮಖ್ಯೆಯಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವಂತೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement