ಬಂಟ್ವಾಳ: ಮುಂಬರುವ ಲೋಕಸಭಾ ಚುನಾವಣೆ ನಿಕ್ಷ್ಪಕ್ಷಪಾತವಾಗಿ, ಶಾಂತಿಯುತವಾಗಿ ಹಾಗೂ ಪಾರದರ್ಶಕವಾಗಿ ನಡೆಯಬೇಕೆನ್ನುವ ಉದ್ದೇಶದಿಂದ ಮಾ.16ರಿಂದ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿದ್ದು ವಿವಿಧ ತಂಡಗಳನ್ನು ರಚಿಸಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಡಾ. ಉದಯ ಶೆಟ್ಟಿ ತಿಳಿಸಿದರು.
ಭಾನುವಾರ ಬಿ.ಸಿ.ರೋಡಿನ ಆಡಳಿತ ಸೌಧದ ಸಭಾಂಗಣದಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿದರು. ಮಾ. 28 ಚುನಾವಣೆ ನೋಟಿಸು ಹೊರಡಿಸುವುದು, ಎ.4 ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ, ಎ.೫ ನಾಮ ಪತ್ರ ಪರಿಶೀಲನೆಯ ದಿನಾಂಕ, ಎ.8 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ, ಎ.26 ಚುನಾವಣೆ ನಡೆಯುವ ದಿನಾಂಕ, ಜೂ.4 ಮತ ಎಣಿಕೆ ದಿನಾಂಕ, ಜೂ.6 ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳುವ ದಿನಾಂಕ ಎಂದು ತಿಳಿಸಿದರು. ಮಾ. 28 ರಿಂದ ಎ.8ರವರೆಗೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ದ.ಕ. ಜಿಲ್ಲಾ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಮುಲ್ಲೈ ಮುಹಿಲನ್ ಅವರಿಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಚುನಾವಣೆಗೆ ಸಂಬಮಧಿಸಿದಂತೆ ಡಿಯುಡಿಸಿ ಯೋಜನಾ ನಿರ್ದೇಶಕ ಡಾ. ಉದಯ ಶೆಟ್ಟಿ ಸಹಾಯಕ ಚುನಾವಣಾಧಿಕಾರಿಯಾಗಿ ಹಾಗೂ 15 ಮಂದಿ ತಾಲೂಕು ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು. ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 249 ಮತಗಟ್ಟೆಗಳಿದ್ದು ಈ ಪೈಕಿ 7 ಅತೀ ಸೂಕ್ಷ ಮತಗಟ್ಟೆಗಳಾಗಿವೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಸಭೆ ಸಮಾರಂಭಗಳು, ಧಾರ್ಮಿಕ ಕಾರ್ಯಕ್ರಮಗಳು, ರಾಜಕೀಯ ಸಭೆ, ಪ್ರಚಾರ ಸಭೆ ಇತ್ಯಾದಿಗಳನ್ನು ನಡೆಸಲು ಸಾರ್ವಜನಿಕರು, ರಾಜಕೀಯ ಪಕ್ಷದವರು ಚುನಾವಣಾಧಿಕಾರಿಗಳು ಸಹಯಕ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆದುಕೊಳ್ಳಬೇಕಾಗಿದೆ. ಪ್ರತೀ ವಿಧಾನಸಭಾ ಕ್ಷೇತ್ರವಾರು ಫ್ಲೈಯಿಂಗ್ ಸ್ಕ್ವಾಡ್, ಸ್ಟಾಟಿಕ್ ಸರ್ವೈಲೆನ್ಸ್ ಟೀಮ್, ವಿಡಿಯೋ ಸರ್ವೈಲೈನ್ಸ್ ಟೀಮ್ಗಳನು ರಚಿಸಿ ಈ ತಂಡಗಳಿಗೆ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನೇಮಕಾತಿ ಮಾಡಲಾಗಿದೆ. ಚಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾದ ಪ್ರಕರಣಗಳು ಕಂಡು ಬಂದಲ್ಲಿ ಸಾರ್ವಜನಿಕರು ಲಿಖಿತವಾಗಿ ಅಥವಾ ದೂರವಾಣಿ ಮೂಲಕ ಸಂಪರ್ಕಿಸಿ ದೂರು ದಾಖಲಿಸಲು ತಂಡಗಳನ್ನು ಹಾಗೂ 3 ಚೆಕ್ ಪೋಸ್ಟ್ ರಚಿಸಲಾಗಿದೆ ಎಂದರು.
ಕಂಟ್ರೋಲ್ ರೂಂ:
ಚುನಾವಣೆಯ ಸಂಬಂಧ ದೂರುಗಳನ್ನು ಸ್ವೀಕರಿಸಲು ಕಂಟ್ರೋಲ್ ರೂಂ ತೆರಯಲಾಗಿದ್ದು ದೂರವಾಣಿ ಸಂಖ್ಯೆ 08255-232500 ಸಂಪರ್ಕಿಸಬಹುದಾಗಿದೆ. ಈ ಕಂಟ್ರೋಲ್ ರೂಂ ದಿನದ 24 ಗಂಟೆಗಳು ಕಾರ್ಯಚರಣೆ ನಡೆಸುತತಿದ್ದು ಚುನಾವಣೆಗೆ ಸಂಬಂಧಿಸಿದ ನೀತಿ ಸಂಹಿತೆ ಉಲ್ಲಂಘನೆಯದ ಪ್ರಕರಣಗಳು ಕಂಡು ಬಂದಲ್ಲಿ ಕಂಟ್ರೋಲ್ ರೂಂಗೆ ದೂರು ನೀಡಬಹುದು ಹಾಗೂ ಚುನಾವಣೆಗೆ ಸಂಬಂಧಿಸಿದ ಅಗತ್ಯ ಮಾಹಿತಿಗಳನ್ನು ಪಡೆಯಬಹುದು ಅಲ್ಲದೆ ಎಂಸಿಸಿ ನೋಡಲ್ ಅಧಿಕಾರಿ ಶಮಂತ್ಕುಮಾರ್ ಅವರ ದೂರವಾಣಿ ಸಂಖ್ಯೆ ೯೬೩೨೪೯೯೭೯೯ ಸಂಪರ್ಕಿಸ ಬಹುದು ಎಂದು ವಿವರಿಸಿದರು.
ಸಿ-ವಿಜಿಲ್ ಆಪ್:
ಸಾರ್ವಜನಿಕರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣಕ್ಕೆ ಸಂಬಂಧಿಸಿದ ದೂರುಗಳನ್ನು ಸಲ್ಲಿಸಲು ಚುನಾವಣಾ ಆಯೋಗವು ಸಿ-ವಿಜಿಲ್ ಮೊಬೈಲ್ ಆಪ್ನ್ನು ಅಭಿವೃದ್ದಿ ಪಡಿಸಿದ್ದು ಈ ಆಪ್ ಮೂಲಕ ಸಾರ್ವಜನಿಕರು ಪೊಟೋ ಹಾಗೂ ವಿಡಿಯೋಗಳ ಮುಖಾಂತರ ದೂರುಗಳನ್ನು ದಾಖಲಿಸಬಹುದಾಗಿದೆ. ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು, ಸುವಿಧಾ ಆಪ್ ಮೂಲಕ ಚುನಾವಣಾ ಪ್ರಚಾರ ಕಾರ್ಯಗಳಿಗೆ ಅನುಮತಿಯನ್ನು ಪಡೆಯಬಹುದಾಗಿದೆ. 85 ವರ್ಷ ಮೇಲ್ಪಟ್ಟ ಮತ್ತು ಪಿಡಬ್ಲ್ಯುಡಿ ಮತದಾರರಿಗೆ ಮತಪತ್ರದ ಮೂಲಕ ಮತದಾನ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದರು. ಸುದ್ದಿಗೋಷ್ಟಿಯಲ್ಲಿ ಚುನಾವಣಾ ಶಾಖೆಯ ಉಪತಹಶೀಲ್ದಾರ್ ನವೀನ್ ಬೆಂಜನಪದವು ಉಪಸ್ಥಿತರಿದ್ದರು.