
ಬಂಟ್ವಾಳ: ಬಿ.ಸಿ.ರೋಡಿನ ನಗರ ಭಾಗದಲ್ಲಿರುವ ಶ್ರೀ ರಕ್ತೇಶ್ವರಿ ದೇವಸ್ಥಾನದಲ್ಲಿ ಮೂರು ದಿನಗಳ ಕಾಲ ವರ್ಷಾವಧಿ ಉತ್ಸವ ವಿಜ್ರಂಭಣೆಯಿಂದ ನಡೆಯಿತು. ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಂತೆ ಮಾ. 16ರಂದು ಉತ್ಸವ ಆರಂಭಗೊಂಡಿದ್ದು ಕೊನೆಯ ದಿನವಾದ ಸೋಮವಾರ ಬೆಳಿಗ್ಗೆ ಗಣಹೋಮ, ಪ್ರಧಾನ ಹೋಮ, ಕಲಶಾಭಿಷೇಕ, ನಾಗಾರಾಧನೆ, ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಿತು.


ಸಂಜೆ ಸಪ್ತಶತಿ ಪಾರಾಯಣ ಸಹಿತ ವಿಶೇಷ ದುರ್ಗಾ ನಮಸ್ಕಾರ ಪೂಜೆ, ರಂಗಪೂಜೆ, ಅಲಂಕಾರ ಪೂಜೆ ಹಾಗೂ ಮಹಾಪೂಜೆ ನಡೆದು ಪ್ರಸಾದ ವಿತರಿಸಲಾಯಿತು.
ಈ ಸಂದರ್ಭ ದೇವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷ ಬಿ. ವಿಶ್ವನಾಥ, ಬೂಡ ಅಧ್ಯಕ್ಷ ಬಿ. ಬೇಬಿ ಕುಂದರ್, ಶ್ರೀ ಅನ್ನಪೂರ್ಣೆಶ್ವರೀ ನಾಗದೇವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೆಶ್ ಪಚ್ಚಿನಡ್ಕ, ಶ್ರೀ ಚಂಡಿಕಾ ಪರಮೇಶ್ವರೀ ದೇವಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಲೋಕನಾಥ ಶೆಟ್ಟಿ , ದೇವಸ್ಥಾನದ ಕಾರ್ಯಕಾರಿ ಸಮಿತಿ ಉಪಾಧ್ಯಕ್ಷ ಬಿ. ಸಂಜೀವ ಪೂಜಾರಿ, ಕಾರ್ಯದರ್ಶಿ ಎನ್. ಶಿವಶಂಕರ್, ಜೊತೆ ಕಾರ್ಯದರ್ಶಿ ರಮೇಶ್ ಸಾಲ್ಯಾನ್, ಕೋಶಾಧಿಕಾರಿ ಬಿ. ಮೋಹನ್, ಟ್ರಸ್ಟಿಗಳಾದ ಗೋಪಾಲ ಸುವರ್ಣ, ರಾಜೇಶ್ ಎಲ್.ನಾಯಕ್, ಸೋಮನಾಥ ನಾಯ್ಡು, ಸದಸ್ಯ ಅಶ್ವನಿ ಕುಮಾರ್ ರೈ, ಸತೀಶ್ ಕುಮಾರ್, ಶ್ರೀಧರ ಮಲ್ಲಿ, ರಾಮಚಂದ್ರ ನಾಯಕ್, ಪದ್ಮನಾಭ ಆಚಾರ್, ಪ್ರಮೋದ್ ಕುಮಾರ್, ಮೊದಲಾದವರು ಉಪಸ್ಥಿತರಿದ್ದರು.

