ಬಂಟ್ವಾಳ: ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಇವರ ಜನ್ಮದಿನೋತ್ಸವ ನೆನೆಪಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಬಂಟ್ವಾಳ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ 2024 ಸೆ.5 ರಂದು ಬೆಳಿಗ್ಗೆ 10 ರಿಂದ ಬಂಟವಾಳದ ಬಂಟರ ಭವನದಲ್ಲಿ ನಡೆಯಲಿದೆ.
ರಾಜ್ಯ ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸುವರು, ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸಲಿದ್ದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಎಸ್. ಬಂಗಾರಪ್ಪ ಗೌರವ ಉಪಸ್ಥಿತರಿರುವರು.
ಗಣ್ಯ ಅತಿಥಿಗಳಾಗಿ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು, ವಿವಿಧ ಅಕಾಡೆಮಿ, ನಿಗಮಗಳ ಅಧ್ಯಕ್ಷರು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕರು ಭಾಗವಹಿಸುವರು.
ಬೆಳಿಗ್ಗೆ 9 ರಿಂದ ಬಂಟ್ವಾಳ ತಾಲೂಕಿನ ವಿವಿಧ ವಿದ್ಯಾಸಂಸ್ಥೆಗಳ ಶಿಕ್ಷಕರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಉದ್ಘಾಟನಾ ಸಮಾರಂಭದಲ್ಲಿ ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ, ಬಂಟ್ವಾಳ ತಾಲೂಕು ನಿವೃತ್ತ ಶಿಕ್ಷಕ, ಶಿಕ್ಷಕೇತರ ನೌಕರರಿಗೆ ಸನ್ಮಾನ, ಕನ್ನಡ ಮಾಧ್ಯಮದಲ್ಲಿ ಕಲಿತು ಎಸ್ ಎಸ್ ಎಲ್ ಸಿ ಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಶಿಕ್ಷಕರ ಮಕ್ಕಳಿಗೆ ಅಭಿನಂದನೆ, ನಡೆಯಲಿದೆ.