ಬಂಟ್ವಾಳ: ಕಲಾ ಸಂಕುಲ ಸಂಸ್ಥೆ (ರಿ.) ರಾಯಚೂರು ಇವರ ವತಿಯಿಂದ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ರಾಯಚೂರು ನಗರದ ರಂಗಮಂದಿರದಲ್ಲಿ ಸೆ. 8 ನಡೆಯಲಿದ್ದು ಶಿಕ್ಷಕ ರತ್ನ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ಯ ಶಿಕ್ಷಕಿ ಸಂಗೀತ ಶರ್ಮ ಪಿ.ಜಿ. ಆಯ್ಕೆಯಾಗಿದ್ದಾರೆ.
ಶಾಲಾ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಸಂಘ ಸಂಸ್ಥೆಗಳ ಸಹಕಾರದಲ್ಲಿ ಪಠ್ಯೇತರ ಚಟುವಟಿಕೆಗಳು ಹಾಗೂ ಶಾಲಾ ಭೌತಿಕ ಅಭಿವೃದ್ಧಿಗೆ ತೊಡಗಿಸಿಕೊಂಡು ಸಮುದಾಯದ ಜೊತೆಗೆ ಉತ್ತಮ ಬಾಂಧವ್ಯ ಹೊಂದಿರುವುದನ್ನು ಗುರುತಿಸಿ ರಾಜ್ಯಮಟ್ಟದ “ಶಿಕ್ಷಕರತ್ನ” ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ, ಸಣ್ಣ ನೀರಾವರಿ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹಾಗೂ ರಾಯಚೂರು ಸಂಸದ ಜಿ.ಕುಮಾರ್ ನಾಯಕ್ ಈ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕಲಾ ಸಂಕುಲ ಸಂಸ್ಥೆಯ ಅಧ್ಯಕ್ಷೆ ರೇಖಾ ಬಡಿಗೇರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.