ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆ ಸಜೀಪಮೂಡ ಗ್ರಾಮದ ಸುಭಾಷ್ ನಗರದಲ್ಲಿರುವ ಶ್ರೀ ಗುರು ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ ಸಜೀಪಮುನ್ನೂರು ಮೂರ್ತೆದಾರರ ಸಹಕಾರಿ ಸಂಘ ಬ್ಯಾಂಕಿಂಗ್ ವ್ಯವಹಾರ ಮಾತ್ರವಲ್ಲಸೆ ಮಾತ್ರವಲ್ಲದೆ ಸಮಾಜದದ ದೀನರಿಗೆ, ಹಿಂದುಳಿದ ವರ್ಗದವರಿಗೆ ನೆರವಾಗುವ ಮೂಲಕ ಮಾದರಿ ಸಹಕಾರಿ ಸಂಘವಾಗಿ ಗುರುತಿಸಿಕೊಂಡಿದೆ ಎಂದರು. ಪೋಷಕರು
ಮಕ್ಕಳಿಗೆ ಸಂಪತ್ತು ಮಾಡಿಡುವ ಬದಲು ಮಕ್ಕಳನ್ನೇ ಸಂಪತ್ತನ್ನಾಗಿ ಮಾಡಬೇಕು, ಮಕ್ಕಳ ಬಗ್ಗೆ ಪೋಷಕರು ಸದಾ ನಿಗಾ ವಹಿಸಬೇಕು ಎಂದರು. ಪೋಷಕರು ಕಷ್ಟ ಪಟ್ಟು ಮಕ್ಕಳಿಗೆ ವಿದ್ಯಾಭ್ಯಾಸ ನೀಡುತ್ತಾರೆ. ಉತ್ತಮ ವಿದ್ಯಾಭ್ಯಾಸ ಪಡೆದು ಒಳ್ಳೆಯ ನಾಗರಿಕರಾಗಿ ತಂದೆ ತಾಯಿಯ ಕಣ್ಣೀರೊರೆಸುವ ಕೆಲಸವನ್ನು ಮಕ್ಕಳು ಮಾಡಬೇಕು, ಸಜೀಪಮುನ್ನೂರು ಮೂರ್ತೆದಾರರ ಸಹಕಾರಿ ಸಂಘ ತನ್ನ ಲಾಭದ ಒಂದು ಅಂಶವನ್ನು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವಾಗಿ ನೀಡುತ್ತಿದ್ದಾರೆ. ಇದನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದು ಸುಂದರ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.
ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸದಸ್ಯರಿಗೆ ನಮ್ಮ ಸಂಘ ಎನ್ನುವ ಅಭಿಮಾನ ಬಂದಾಗ ಸಂಘ ಯಶಸ್ವಿಯಾಗಿ ಮುಂದುವರೆಯಲು ಸಾಧ್ಯವಿದೆ ಎಂದು ತಿಳಿಸಿದರು. ಆಡಳಿತ ಮಂಡಳಿ ಹಾಗೂ ಸಿಬ್ಬಂದಿಯ ಪರಿಶ್ರಮ, ಗ್ರಾಹಕರ ಸಹಕಾರದಿಂದ ಸಂಘ ಲಾಭದಲ್ಲಿ ಮುನ್ನಡೆಯುತ್ತಿದೆ, ಇದರ ಫಲವಾಗಿ ಇಂದು ಮಹಾಸಭೆ ಅತ್ಯಂತ ಶಿಸ್ತುಬದ್ದವಾಗಿ ನಡೆದಿದೆ ಎಂದು ತಿಳಿಸಿದ ಅವರು ಸದಸ್ಯರಿಗೆ ಶೇ. 25 ಡಿವಿಡೆಂಟ್ ಘೋಷಿಸಿದರು.
ವಕೀಲ ಚಿದಾನಂದ ಕಡೆಶೀವಾಲಯ ಕಾರ್ಯಕ್ರಮ ಉದ್ಘಾಟಿಸಿದರು.
ಹಿರಿಯ ಮೂರ್ತೆದಾರರಾದ ನೋಣಯ್ಯ ಪೂಜಾರಿ, ತಿಮ್ಮಪ್ಪ ಪೂಜಾರಿ ಕೊಟ್ಟಾರಿ ಪಾಲು, ಸಿದ್ದಕಟ್ಟೆಯ ಪಿಗ್ಮಿ ಸಂಗ್ರಹಕಾರ ಸುನೀಲ್ ಕುಮಾರ್ ಅವರನ್ನು ಗೌರವಿಸಲಾಯಿತು. 180 ಮಂದಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಇತ್ತೀಚೆಗೆ ನಿಧನರಾದ ಮಾಜಿ ನಿರ್ದೇಶಕ ಶೀನ ಬೆಳ್ಚಾಡ ಅವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಗ್ರಾಹಕ ರಾಜಾ ಬಂಟ್ವಾಳ ಅನಿಸಿಕೆ ವ್ಯಕ್ತಪಡಿಸಿದರು
ದ.ಕ. ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಉಪಾಧ್ಯಕ್ಷ ರಾಜೇಶ್ ಸುವರ್ಣ, ಸದಸ್ಯ ವಿಶ್ವನಾಥ ಬಿ. ಮಾಜಿ ನಿರ್ದೇಶಕ ಶರತ್ ಕುಮಾರ್,
ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ ಬೀಡಿನ ಪಾಲು,ನಿರ್ದೇಶಕರಾದ ವಿಠಲ ಬೆಳ್ಚಾಡ, ರಮೇಶ್ ಅನ್ನಪ್ಪಾಡಿ, ಅಶೋಕ್ ಕೋಮಾಲಿ, ಸುಜಾತ ಮೋಹನದಾಸ,ವಾಣಿ ವಸಂತ, ಅರುಣ್ ಕುಮಾರ್ ಎಂ.
ಆಶೀಶ್ ಪೂಜಾರಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಮತಾ ಜಿ. ಉಪಸ್ಥಿತರಿದ್ದರು.
ನಿರ್ದೇಶಕ ಗಿರೀಶ್ ಕುಮಾರ್ ಪೆರ್ವ ಕಾರ್ಯಕ್ರಮ ನಿರೂಪಿಸಿದರು. ಜಯಶಂಕರ್ ಕಾನ್ಸಲೆ ವಂದಿಸಿದರು.