ಬಂಟ್ವಾಳ: ಹಿಂದೂ ಧಾರ್ಮಿಕ ಸೇವಾ ಸಮಿತಿ ಇದರ ಆಶ್ರಯದಲ್ಲಿ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಸ್ಥಾನದ ವಠಾರದಲ್ಲಿ 4 ದಿನ ಆರಾಧಿಸಲಾದ 45 ನೇ ವರ್ಷದ ಭವ್ಯ ಶೋಭಾಯಾತ್ರೆ ಮಂಗಳವಾರ ಸಂಜೆ ಬಿ.ಸಿ.ರೋಡಿನಲ್ಲಿ ವಿಜ್ರಂಭಣೆಯಿಂದ ನಡೆಯಿತು
Advertisement
Advertisement
Advertisement
ಶ್ರೀ ಗಣೇಶನ ವಿಗ್ರಹಕ್ಕೆ ವಿಸರ್ಜನಾ ಪೂಜೆ ನೆರವೇರಿಸಿ ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು. ವಿವಿಧ ಸಂಘ ಸಂಸ್ಥೆಗಳ ಟ್ಯಾಬ್ಲೋಗಳು, ಹುಲಿ ಕುಣಿತ, ಗೊಂಬೆ ಜುಣಿತ, ಚೆಂಡ ವಾದನ ಶೋಭಾಯಾತ್ರೆಗೆ ಮೆರುಗು ನೀಡಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಬಿ.ಸಿ.ರೋಡಿನ ರಸ್ತೆ ಇಕ್ಕೆಲ, ಕಟ್ಟಡಗಳಲ್ಲಿ ನಿಂತು ಶೋಭಾಯಾತ್ರೆಯನ್ನು ಕಣ್ತುಂಬಿ ಕೊಂಡರು. ಶೋಭಾಯಾತ್ರೆ ರಕ್ತೇಶ್ವರಿ ದೇವಸ್ಥಾನದ ಬಳಿಯಿಂದ ಹೊರಟು ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ, ಕೈಕಂಬದತ್ತ ಸಾಗಿತು.
Advertisement