





ಬಂಟ್ವಾಳ: ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಪೊಳಲಿ ಇಲ್ಲಿಯ ವಿದ್ಯಾರ್ಥಿಗಳಾದ ಸಂದೀಪ್, ಜತಿನ್ ಅಯ್ಯಪ್ಪ , ಗೀತೇಶ್, ರಕ್ಷಾ ಮತ್ತು ಅನನ್ಯ ಇವರು ಬಹುಮಾನಗಳನ್ನು ಪಡೆದಿರುತ್ತಾರೆ. ಈ ಪೈಕಿ ಸಂದೀಪ್ ಮತ್ತು ಜತಿನ್ ಅಯ್ಯಪ್ಪ ಇವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಪೊಳಲಿ ಶ್ರೀ ರಾಮಕೃಷ್ಣ ತಪೋವನದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
