ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2023-24ನೇ ಸಾಲಿನಲ್ಲಿ 445.45 ಕೋಟಿ ವ್ಯವಹಾರ ನಡೆಸಿ 1.68 ಕೋಟಿ ಲಾಭಾಂಶ ಗಳಿಸಿದ್ದು ಸಂಘದ ಸದಸ್ಯರಿಗೆ ಶೇ.12 ರಷ್ಟು ಲಾಭಾಂಶ ನೀಡಲಾಗುವುದೆಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಹೇಳಿದರು.
ಅವರು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೇಂದ್ರ ಕಛೇರಿಯ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ಜರಗಿದ 2023-24 ನೇ ಸಾಲಿನ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.
ಸಂಘದಲ್ಲಿ ೫೨೪೦ ಎ ತರಗತಿ ಸದಸ್ಯರು , ೧೮೬೬ ಡಿ ತರಗತಿ ಸದಸ್ಯರು ಸೇರಿದಂತೆ ಒಟ್ಟು ೭೧೦೬ ಸದಸ್ಯರನ್ನು ಹೊಂದಿದೆ, ವರದಿ ವರ್ಷದಲ್ಲಿ ೧೫೪೭ ಮಂದಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ೩೪.೫೫ ಕೋಟಿ ಸಾಲವನ್ನು ಮಂಗಳಾ ಕಿಸಾನ್ ಕಾರ್ಡ್ ಮೂಲಕ ವಿತರಿಸಲಾಗಿದ್ದು, ಶೇ.3 ಬಡ್ಡಿದರದಲ್ಲಿ ಕೃಷಿ ಅಭಿವೃದ್ದಿಗಾಗಿ 243ಮಂದಿ ರೈತರಿಗೆ 7 ಕೋಟಿ ಸಾಲ ನೀಡಲಾಗಿದೆ. ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಹಸುಗಳ ನಿರ್ವಹಣೆಗಾಗಿ ಶೂನ್ಯ ಬಡ್ಡಿದರದಲ್ಲಿ ೨.೫೯ ಕೋಟಿ ನೀಡಲಾಗಿದೆ. ಜಮೀನು ಅಡಮಾನ ಸಾಲ ಮತ್ತು ವೈಯಕ್ತಿಕ ಸಾಲ ಸೇರಿದಂತೆ ಒಟ್ಟು 10.80 ಕೋಟಿ ಸಾಲ ವಿತರಿಸಲಾಗಿದೆ. ಒಟ್ಟಿನಲ್ಲಿ ೨೧೯೪ ಸದಸ್ಯರಿಗೆ 55 ಕೋಟಿ ಸಾಲವನ್ನು ನೀಡಲಾಗಿದೆ ಎಂದರು.
ಸೇನೆಯಲ್ಲಿ ನಿವೃತ್ತಿಗೊಂಡಿರುವ ರಾಜು ಪೂಜಾರಿ ಹಲಾಯಿ, ದಯಾನಂದ ಶೆಟ್ಟಿ, ಮೋಹನ್ ಜಿ. ಮೂಲ್ಯರವರನ್ನು ಗೌರವಿಸಲಾಯಿತು. ಸಂಘದಲ್ಲಿ ಸದಸ್ಯರಾಗಿದ್ದು, ಮರಣ ಹೊಂದಿದ ೩೬ ಮಂದಿ ಸದಸ್ಯರಿಗೆ ಮಹಾಸಭೆಯಲ್ಲಿ ನುಡಿನಮನ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸತೀಶ್ ಪೂಜಾರಿ, ನಿರ್ದೇಶಕರಾದ ಪದ್ಮರಾಜ್ ಬಲ್ಲಾಳ್ ಮವಂತೂರು, ಸಂದೇಶ್ ಶೆಟ್ಟಿ ಪೊಡುಂಬ, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ದಿನೇಶ್ ಪೂಜಾರಿ ಹುಲಿಮೇರು, ವೀರಪ್ಪ ಪರವ, ಜಾರಪ್ಪ ನಾಯ್ಕ, ಉಮೇಶ್ ಗೌಡ, ದೇವರಾಜ್ ಸಾಲ್ಯಾನ್, ಅರುಣಾ ಶೆಟ್ಟಿ, ಮಂದರಾತಿ ಎಸ್ ಶೆಟ್ಟಿ, ವೃತ್ತಿ ಪರ ನಿರ್ದೇಶಕ ಮಾಧವ ಶೆಟ್ಟಿಗಾರ್ ಉಪಸ್ಥಿತರಿದ್ದರು. ಮಹಾಸಭೆಯಲ್ಲಿ ಸಂಘದ ಮಾಜಿ ಅಧ್ಯಕ್ಷ ಗೋಪಿನಾಥ ರೈ, ಸಿದ್ದಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ರತ್ನಕುಮಾರ್ ಚೌಟ, ಆರಂಬೋಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಹುಲಿಮೇರು, ಕುಕ್ಕಿಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಶೆಟ್ಟಿ ಬದ್ಯಾರ್, ಪ್ರಮುಖರಾದ ರಶ್ಮಿತ್ ಶೆಟ್ಟಿ, ಸಂದೀಪ್ ಶೆಟ್ಟಿ ಪೊಡುಂಬ, ಲಕ್ಷ್ಮೀಧರ ಶೆಟ್ಟಿ, ನಾರಯಣ ನಾಯಕ್ ಕರ್ಪೆ, ಜಯರಾಮ ಅಡಪ ,ಕಿರಣ್ ಮಂಜಿಲ, ರಾಜೇಶ್ ಶೆಟ್ಟಿ ಸೀತಾಳ, ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ವಾರ್ಷಿಕ ವರದಿ ವಾಚಿಸಿದರು. ಸಂಘದ ನಿರ್ದೇಶಕ ಹರೀಶ್ ಆಚಾರ್ಯ ಸ್ವಾಗತಿಸಿ, ನಿರ್ದೇಶಕಿ ಮಂದಾರತಿ ಎಸ್ ಶೆಟ್ಟಿ ವಂದಿಸಿದರು. ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು.