ಬಂಟ್ವಾಳ: ಈ ಬಾರಿ ಪ್ರಾಯೋಗಿಕವಾಗಿ ನಡೆಸಿದ ಶ್ರೀ ಕೃಷ್ಣ ವೇಷ ಸ್ಪರ್ಧೆ ಯಶಸ್ವಿಯಾಗಿ ನಡೆದಿದ್ದು ಮುಂದಿನ ವರ್ಷ ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಬಂಟ್ವಾಳ ತುಳುಕೂಟದ ಅಧ್ಯಕ್ಷ ಸುದರ್ಶನ್ ಜೈನ್ ಹೇಳಿದರು.
ದಕ್ಷಿಣ ಕನ್ನಡ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿ. ಬಂಟ್ವಾಳ ವಿಶಂತಿ ಸಂಭ್ರಮದ ಪ್ತಯುಕ್ತ ಸಂಘದ ಆಶ್ರಯದಲ್ಲಿ ಹಾಗೂ ತುಳುಕೂಟ ಬಂಟ್ವಾಳ ಇದರ ಸಂಯೋಜನೆಯಲ್ಲಿ ನಡೆದ ಶ್ರೀ ಕೃಷ್ಣ ವೇಷ ಸ್ಪರ್ಧೆ 2024 ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು ಅವರನ್ನು ಗೌರವಿಸಲಾಯಿತು. ಕೃಷ್ಣ ವೇಷ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ವೇದಿಕೆಯಲ್ಲಿ ತುಳುಕೂಟದ ಉಪಾಧ್ಯಕ್ಷ ಸೀತಾರಾಮ ಶೆಟ್ಟಿ ಸಜೀಪ, ಕಾರ್ಯಕ್ರಮ ಸಂಯೋಜಕ ದಿವಾಕರ ದಾಸ್, ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಜಿತ್ ಕುಮಾರ್ ಜೈನ್ ಉಪಸ್ಥಿತರಿದ್ದರು. ತೀರ್ಪುಗಾರರ ಪರವಾಗಿ ರವೀಂದ್ರ ಕುಕ್ಕಾಜೆ ಮಾತನಾಡಿದರು.
ದ.ಕ. ವರ್ತಕರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ಸ್ವಾಗತಿಸಿದರು, ತುಳುಕೂಟದ ಅಧ್ಯಕ್ಷ ಎಚ್ಕೆ ನಯನಾಡು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.