ಬಂಟ್ವಾಳ: ಬಸವಣ್ಣ ಚಿಂತನೆ ಸಾರ್ವಕಾಲಿಕವಾದದ್ದು
ಕ್ರಾಂತಿಯೋಗಿ ಬಸವಣ್ಣ 12ನೇ ಶತಮಾನದಲ್ಲೇ ಸಮಾಜದ ಸಮಾನತೆಗಾಗಿ ಶ್ರಮಿಸಿದವರು.ಕಾಯಕ ತತ್ವದ ಪ್ರತಿ ಪಾದಕರಾಗಿ ದೇಹವೇ ದೇಗುಲವೆಂದು ಸಾರಿ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದವರುಎಂದು ಬಂಟ್ವಾಳ ತಹಶೀಲ್ದಾರ್
ಸಣ್ಣ ರಂಗಯ್ಯ ಹೇಳಿದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ಮಂಗಳವಾರ ನಡೆದ ಬಸವಣ್ಣನವರ ಜಯಂತಿ ಆಚರಣೆಯ ಅಧ್ಯಕ್ಷತೆ ವಹಿಸಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್ ಆಹಾರ ಶಾಖೆಯ ಶ್ರೀನಿವಾಸ್ ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ ತಾಲೂಕು
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು, ಸಾರ್ವಜನಿಕರು ಉಪಸ್ಥಿತರಿದ್ದರು.
ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಸ್ವಾಗತಿಸಿ ವಂದಿಸಿದರು.
*ಬಂಟ್ವಾಳದಲ್ಲಿ ಬಸವಣ್ಣನವರ ಜಯಂತಿ ಆಚರಣೆ
