ಬಂಟ್ವಾಳ: ಜೆಸಿಐ ಬಂಟ್ವಾಳದ ಆಶ್ರಯದಲ್ಲಿ ದಸರಾ ಹಬ್ಬದ ಪ್ರಯುಕ್ತ ದಾಂಡಿಯ ನೈಟ್ಸ್ ವಿಶೇಷ ಕಾರ್ಯಕ್ರಮ ಅ.5ರಂದು ಶನಿವಾರ ಸಂಜೆ 6 ಗಂಟೆಗೆ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಜೆಸಿಐ ವಲಯ ನಾಯಕರು, ಗಣ್ಯರು ಭಾಗವಹಿಸಲಿದ್ದಾರೆ. ಯಕ್ಷಗಾನ ಹಾಗೂ ರಂಗಭೂಮಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಬ್ಬರು ಸಾಧಕರನ್ನು ಸಭಾ ವೇದಿಕೆಯಲ್ಲಿ ಗೌರವಿಸಲಾಗುವುದು ಎಂದು ಜೆಸಿಐ ಬಂಟ್ವಾಳದ ಅಧ್ಯಕ್ಷೆ ರಶ್ಮಿ ಶೆಟ್ಟಿ ತಿಳಿಸಿದ್ದಾರೆ.
Advertisement
Advertisement