
ಬಂಟ್ವಾಳ: ಪತ್ರಿಕಾ ಏಜೆಂಟ್, ಬಿ.ಸಿ.ರೋಡಿನ ನಂದಿನಿ ಮಿಲ್ಕ್ ಪಾರ್ಲರ್ ಮಾಲಕ ವಸಂತ ಆಚಾರ್ಯ ( 56) ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕೊಡುಗೈದಾನಿಯಾಗಿದ್ದು, ವಿಶ್ವಕರ್ಮ ಸಂಘದ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿದ್ದು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಇವರು ಇಂದು ಪೊಳಲಿ ದೇವಸ್ಥಾನಕ್ಕೆ ಭೇಟಿ ನೀಡಿ ಹೊರ ಬರುತ್ತಿದ್ದಾಗ ಹಠಾತ್ ಆಗಿ ಎದೆ ನೋವು ಕಾಣಿಸಿಕೊಂಡು ಬಿದ್ದಿದ್ದಾರೆ.
ಕೂಡಲೇ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಆವರು ಮೃತಪಟ್ಟ ಬಗ್ಗೆ ಮಾಹಿತಿ ನೀಡಿದ್ದಾರೆ.



Advertisement







