ಬಂಟ್ವಾಳ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲ್ಪಡುತ್ತಿರುವ ಶ್ರೀ ದೇವರಾಜು ಅರಸು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಗಿರಿಗುಡ್ಡೆ ಇದರ ಹಾಸ್ಟೆಲ್ ಡೇ ಹಾಗೂ ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಶನಿವಾರ ಸಂಜೆ ವಿದ್ಯಾರ್ಥಿ ನಿಲಯದ ಆವರಣದಲ್ಲಿ ನಡೆಯಿತು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿಂದಿಯಾ ನಾಯಕ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಮಾತು ಉತ್ತಮವಾಗಿರ ಬೇಕು, ಮಾತಿನಲ್ಲಿ ಇನ್ನೊಬ್ಬರನ್ನು ನಿಂದಿಸದೆ, ನೋಯಿಸದೇ, ವಿಡಂಬಣೆ ಮಾಡದೆ ಸದ್ವಿಚಾರ ಹಾಗೂ ಮೌಲ್ಯಗಳನ್ನು ಜೀವನದಲ್ಲಿ ಮೈಗೂಡಿಸಿಕೊಂಡಾಗ ವಿದ್ಯಾರ್ಥಿಗಳ ಭವಿಷ್ಯ ಉಜ್ಬಲವಾಗಿರುತ್ತದೆ ಎಂದು ತಿಳಿಸಿದರು.
ವಾಮದಪದವು ವಿದ್ಯಾರ್ಥಿ ನಿಲಯದ ವಾರ್ಡ್ ನ್ ಭವಾನಿ, ಜಿಪಿಟಿಯ ಕಂಪ್ಯೂಟರ್ ಶಿಕ್ಷಕ ಶ್ರೀನಿವಾಸ ಗೌಡ, ಶಂಭೂರು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ವಾರ್ಡನ್ ವಿಶ್ವನಾಥ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ
ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತಪಡಿಸಿದರು.
ಗಿರಿಗುಡ್ಡೆ ವಿದ್ಯಾರ್ಥಿನಿಲಯದ ವಾರ್ಡನ್ ಪುಷ್ಪಲತಾ ಸ್ವಾಗತಿಸಿದರು, ಕೌಶಲ್ ಬಹುಮಾನಿತರ ಪಟ್ಟಿ ವಾಚಿಸಿದರು, ನಿಖಿಲ್ ವಂದಿಸಿದರು. ಬಸವರಾಜ್ ಕಾರ್ಯಕ್ರಮ ನಿರೂಪಿಸಿದರು.