
ಬಂಟ್ವಾಳ: ಉದ್ಯಮಿ, ಸಹಕಾರಿ ಧುರೀಣ ಸಜೀಪಮೂಡ ಗ್ರಾಮದ ಕುಚ್ಚಿಗುಡ್ಡೆ ಕೆ. ಸಂಜೀವ ಪೂಜಾರಿ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಸಂಘವನ್ನು ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಕಡಿಮೆ ಅವಧಿಯಲ್ಲಿ ಅತ್ಯಧಿಕ ಶಾಖೆಗಳನ್ನು ತೆರೆದು ಬಡಕುಟುಂಬದ ಮಹಿಳೆಯರಿಗೆ ಉದ್ಯೋಗ ನೀಡುವ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ.
ಸಜೀಪಮೂಡ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷರಾಗಿ ಸಜೀಪಮೂಡದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜ್ಞಾನ ಮಂದಿರವನ್ನು ನಿರ್ಮಿಸಿದ ಹೆಗ್ಗಳಿಕೆ ಇವರದ್ದು. ಉದ್ಯಮಿಯಾಗಿ, ತಾಲೂಕು ಪಂಚಾಯತಿ ಸದಸ್ಯರಾಗಿಯೂ ಗುರುತಿಸಿಕೊಂಡಿದ್ದಾರೆ.
