ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಇದರ ಆಶ್ರಯದಲ್ಲಿ ಈ ಸಾಲಿನ ಇಂಟರಾಕ್ಟ್ ಕ್ಲಬ್ ನ ಪದಾಧಿಕಾರಿಗಳಿಗೆ ಪದಗ್ರಹಣ ಸಮಾರಂಭ ಸಜೀಪಮೂಡ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಬೇಬಿ ಕುಂದರ್ ಪದಗ್ರಹಣ ನೆರವೇರಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ನಾಯಕತ್ವ ಹಾಗೂ ಸೇವಾಗುಣವನ್ನು ಮೂಡಿಸಲು ಇಂಟರಾಕ್ಟ್ ಕ್ಲಬ್ ಸಹಕಾರಿಯಾಗಿದೆ ಎಂದರು.
Advertisement
Advertisement
Advertisement
ಶಾಲೆಯ ಹಿರಿಯ ವಿದ್ಯಾರ್ಥಿ ಸಂದೀಪ್ ಸಾಲ್ಯಾನ್, ಉಪಪ್ರಾಂಶುಪಾಲೆ ಜ್ಯೋತಿ ಕುಮಾರಿ, ಇಂಟರಾಕ್ಟ್ ಸಂಯೋಜಕ ಬಾಲಕೃಷ್ಣ ಶೆಟ್ಟಿ ವೇದಿಕೆಯಲ್ಲಿದ್ದರು. ನೂತನ ಅಧ್ಯಕ್ಷೆ ಕೃತಿಕಾ ಅಧಿಕಾರ ಸ್ವೀಕರಿಸಿ ಮಾತನಾಡಿದರು. ನಿರ್ಗಮಿತ ಅಧ್ಯಕ್ಷೆ ಅಶುರಾ ಅನಿಸಿಕೆ ವ್ಯಕ್ತಪಡಿಸಿದರು.
ಕೃತಿಕಾ ಸ್ವಾಗತಿಸಿ, ಅಶುರಾ ವಂದಿಸಿದರು, ಇಮ್ನಾಝ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.
Advertisement