
ಬಂಟ್ವಾಳ: ತುಂಬೆಯ ಶ್ರೀ ಮಹಾಲಿಂಗೇಶ್ವರ
ದೇವಸ್ಥಾನಕ್ಕೆ ಸೋಮವಾರ ರಾತ್ರಿ ಕಳ್ಳರು ನುಗ್ಗಿ ಸೊತ್ತುಗಳನ್ನು ಕಳವುಗೈದಿದ್ದಾರೆ. ದೇವಸ್ಥಾನದ ಕಚೇರಿಯಲ್ಲಿದ್ದ ಬೆಳ್ಳಿಯ ಅಭಿಷೇಕದ ಜಲಧಾರಿಣಿ ಹಾಗೂ ದೇವಸ್ಥಾನದ ಒಳಗಿದ್ದ ಹುಂಡಿಯ ಕಾಣಿಕೆ ಹಣವನ್ನು ಕಳ್ಳರು ದೋಚಿದ್ದಾರೆ. ದೇವಸ್ಥಾನಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳವನ್ನೂ ಕರೆಸಿಕೊಳ್ಳಲಾಗಿದೆ. ಸೋಮವಾರ ಇಲ್ಲೇ ಪಕ್ಕದ ಸುಜೀರು ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು ಜನ ಆತಂಕ ಗೊಂಡಿದ್ದಾರೆ

